ಮಾಸ್ಕ್ ಧರಿಸದೆ ಹೊರಗೆ ತೆರಳುವಂತಿಲ್ಲ ! ಕೊರೊನಾ ತಡೆಗೆ ಸಿಎಂ ಕಠಿಣ ನಿಯಮ ಜಾರಿ

17-03-21 03:19 pm       Headline Karnataka News Network   ಕರ್ನಾಟಕ

ಸಿಎಂ ಯಡಿಯೂರಪ್ಪ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.

ಬೆಂಗಳೂರು, ಮಾ. 17: ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಸಿಎಂಗಳಿಗೆ ನೀಡಿರುವ ಸೂಚನೆಯ ಮೇರೆಗೆ ಕರ್ನಾಟಕದ ಸಿಎಂ ಯಡಿಯೂರಪ್ಪ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿದ್ದಾರೆ.

ಮಾಸ್ಕ್ ಇಲ್ಲದೆ ಯಾರು ಕೂಡ ಹೊರಗೆ ಬರಬಾರದು. ಎಲ್ಲರೂ ಮಾಸ್ಕ್ ಧರಿಸಬೇಕು. ಮಾಸ್ಕ್ ರಹಿತರಿಗೆ ಸ್ಥಳದಲ್ಲೇ ದಂಡ ವಿಧಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಈ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ತಕ್ಷಣದಿಂದಲೇ ಕ್ರಮ ವಹಿಸಲು ಸೂಚನೆ ನೀಡಿದ್ದಾರೆ.

ಅಲ್ಲದೆ, ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ನಿಯಂತ್ರಣ ವಿಧಿಸಲು ಸೂಚನೆ ನೀಡಲಾಗಿದೆ. ಮದುವೆ, ಪಾರ್ಟಿ ಇನ್ನಿತರ ಕಾರ್ಯಕ್ರಮಗಳಲ್ಲಿ ಈಗಾಗ್ಲೇ ವಿಧಿಸಲಾಗಿರುವ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡುವಂತೆ ಜಿಲ್ಲಾಧಿಕಾರಿಗಳು ನೋಡಿಕೊಳ್ಳಬೇಕು. ಇದರ ಜೊತೆಗೆ ಸಾರಿಗೆ ವಾಹನಗಳಲ್ಲಿಯೂ ಜನರು ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದನ್ನು ಕಡ್ಡಾಯ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಇದರ ಜೊತೆಗೆ, ಲಸಿಕೆ ನೀಡುವ ವೇಗವನ್ನು ದುಪ್ಪಟ್ಟು ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ಕೋವಿಡ್ ಕೇರ್ ಸೆಂಟರ್ ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲ ಕಡೆ ಕೋವಿಡ್ ಲಸಿಕೆ ಸಿಗುವಂತೆ ಕ್ರಮ ವಹಿಸಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಸಲಹೆಯಂತೆ ಟ್ರೇಸ್, ಟ್ರ್ಯಾಕ್, ಟ್ರೀಟ್ ಎಂಬ ಮಂತ್ರದ ಆಧಾರದಲ್ಲಿ ಕೆಲಸ ಮಾಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

No mask no entry on road says Karnataka CM Yediyurappa to avoid covid wave two after long discussion when P.M Modi