ಬ್ರೇಕಿಂಗ್ ನ್ಯೂಸ್
19-03-21 12:05 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.19 : ರಾಜ್ಯದಲ್ಲಿ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಬಾರಿ ರಣತಂತ್ರ ಹೆಣೆಯಲು ಮುಂದಾಗಿದೆ. ಅದರ ಭಾಗವಾಗಿ ಪಕ್ಷದ ಹಿರಿಯ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿರಿಯ ಕಾಂಗ್ರೆಸ್ ಮುಖಂಡರಿಗೆ ಭೋಜನ ಕೂಟ ಹಮ್ಮಿಕೊಂಡಿದ್ದಾರೆ.
ಮಾರ್ಚ್ 24ರಂದು ಸಿದ್ದರಾಮಯ್ಯ ತಮ್ಮ ಸರ್ಕಾರಿ ನಿವಾಸದಲ್ಲಿ ಭೋಜನ ಕೂಟ ಹಮ್ಮಿಕೊಂಡಿದ್ದು, ಹಿರಿಯ ಮುಖಂಡರನ್ನು ಭೋಜನಕ್ಕೆ ಆಹ್ವಾನಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ.
ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ವಿಚಾರಗಳು ಈ ಸಂದರ್ಭದಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ವಿಚಾರದಲ್ಲಿ ಪ್ರಮುಖವಾಗಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಕಳೆದ ಎರಡು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು ಈ ಬಾರಿ ಗೆಲ್ಲಲೇಬೇಕೆಂಬ ಸವಾಲು ಕೆಪಿಸಿಸಿ ಮುಂದಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸಿನ ಹಿರಿಯ ಮುಖಂಡರನ್ನು ಕರೆದು ಒಂದೆಡೆ ಸೇರಿಸುವ ನಿಟ್ಟಿನಲ್ಲಿ ಭೋಜನ ಕೂಟದ ಏರ್ಪಡಿಸಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಿ.ಡಿ ಹಾಗೂ ಇನ್ನಿತರ ವಿಚಾರಗಳಲ್ಲಿ ಮುಜುಗರ ಸೃಷ್ಟಿಯಾಗಿದ್ದು, ಈ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಕಾಂಗ್ರೆಸ್, ಅದೇ ವಿಚಾರವನ್ನು ಮುಂದಿಟ್ಟು ಹೋರಾಟ ನಡೆಸುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
ಸದ್ಯದ ರಾಜಕೀಯ ಸನ್ನಿವೇಶ ಕಾಂಗ್ರೆಸ್ ಪರವಾಗಿದ್ದು, ಈ ಸಂದರ್ಭದಲ್ಲಿ ಪಕ್ಷದಲ್ಲಿ ಒಗ್ಗಟ್ಟು ಪ್ರದರ್ಶನ ಹಾಗೂ ಭಿನ್ನಾಭಿಪ್ರಾಯ ಶಮನ ಗೊಳಿಸುವ ನಿಟ್ಟಿನಲ್ಲಿ ಭೋಜನ ಕೂಟವನ್ನು ವೇದಿಕೆಯನ್ನಾಗಿ ಬಳಸಿಕೊಳ್ಳಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ನಾಯಕರ ಒಳಜಗಳ, ಸಚಿವ ಸಂಪುಟದ ಅಸಮಾಧಾನ, ಜೊತೆಗೆ ಸಿಡಿ ರಾಜಕೀಯವನ್ನು ಮುಂದಿಟ್ಟು ಬಿಜೆಪಿಯನ್ನು ಹಣಿಯಲು ಮುಂದಾಗಿದ್ದಾರೆ.
Congress leader Siddaramaiah invites members for dinner party considering Karnataka Bypolls elections 2021.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm