ಬ್ರೇಕಿಂಗ್ ನ್ಯೂಸ್
21-03-21 11:57 am Headline Karnataka News Network ಕರ್ನಾಟಕ
ಬ್ರಹ್ಮಾವರ, ಮಾ.21 : ಇಲ್ಲಿನ ನೈಲಾಡಿ ಸಮೀಪ ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ ನಸುಕಿನ ವೇಳೆ ಮನೆಯ ಕೋಣೆಯೊಳಗೆ ಬಂಧಿಯಾದ ಘಟನೆ ನಡೆದಿದೆ.
ಇಂದು ನಸುಕಿನಲ್ಲಿ ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆ, ಹೆದರಿದ ನಾಯಿ ಜೊತೆ ಮನೆಯ ಕೋಣೆಯೊಳಗೆ ನುಗ್ಗಿ ಸೇರಿದೆ. ಕೋಣೆಯೊಳಗೆ ಸದ್ದು ಕೇಳಿ ಮನೆಯವರು ಎಚ್ಚರಗೊಂಡು ಕೋಣೆಯ ಬಾಗಿಲು ಹಾಕಿದ್ದಾರೆ. ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು ಕೂಡಲೇ ಆಗಮಿಸಿದ ತಂಡ ಚಿರತೆಯನ್ನು ಬಂಧಿಸಿದೆ.
ಸ್ಥಳಕ್ಕೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ ನಾಯ್ಕ್, ಸಿಬ್ಬಂದಿ ರವಿ, ರವೀಂದ್ರ, ಸಂತೋಷ್ ಜೋಗಿ, ವಿಠಲ್ ನಾಯ್ಕ್, ಲಕ್ಷ್ಮಣ, ಶಿವು, ಸುದೀಪ್ ಶೆಟ್ಟಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಬೋನು ಇಟ್ಟು ಅರಣ್ಯ ಇಲಾಖೆ ಸಿಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಒಯ್ದಿದ್ದಾರೆ. ಸ್ಥಳದಲ್ಲಿ ಪರಿಸರದ ನೂರಾರು ಗ್ರಾಮಸ್ಥರು ನೆರೆದಿದ್ದರು. ಒಂದೂವರೆ ಗಂಟೆಯ ನಿರಂತರ ಕಾರ್ಯಾಚರಣೆ ನಡೆಸಿ ಚಿರತೆಯನ್ನು ರಕ್ಷಿಸಲಾಯಿತು. ಬಳಿಕ ಸಾಯಿಬರ್‌ಕಟ್ಟೆ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಮೀಸಲು ಅರಣ್ಯದಲ್ಲಿ ಚಿರತೆಯನ್ನು ಬಿಡಲಾಯಿತು.
A Cheetah was trapped inside a house at Bramavara in Udupi after chasing Dog. The forest official have trapped the cheetah and left it to the forest.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm