ಬ್ರೇಕಿಂಗ್ ನ್ಯೂಸ್
21-03-21 08:46 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ. 22: ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕೆಲವರ ವಿರೋಧಕ್ಕೆ ಕಾರಣವಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ವಿಚಾರವನ್ನು ಸ್ವತಃ ಬಿ.ಟಿ ಲಲಿತಾ ನಾಯಕ್ ಅವರೇ ಬಹಿರಂಗ ಪಡಿಸಿದ್ದಾರೆ.
ಬಂಡಾಯ ಸಾಹಿತಿ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಬಿ.ಟಿ ಲಲಿತಾ ನಾಯಕ್ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಲಲಿತಾ ನಾಯಕ್, ತಮಗೆ ಸೇರಿದಂತೆ ಹಲವು ಗಣ್ಯರಿಗೆ ಕೊಲೆ ಬೆದರಿಕೆ ಬಂದಿರುವ ಪತ್ರವನ್ನು ಉಲ್ಲೇಖಿಸಿ ಮಾತನಾಡಿದರು.
ಮೇ 1 ರಂದು ನನ್ನನ್ನು ಕೊಲೆ ಮಾಡುವುದಾಗಿ ಹೇಳಿ ನನಗೆ ಪತ್ರ ಬಂದಿತ್ತು. ಬಿಜೆಪಿ ಶಾಸಕ ಸಿ.ಟಿ. ರವಿ, ಸಂಪಾದಕ ರಂಗನಾಥ್(ಪಬ್ಲಿಕ್ ಟಿವಿ), ನಟ ಶಿವರಾಜ್ ಕುಮಾರ್ ಅವರನ್ನು ಕೊಲೆ ಮಾಡುತ್ತಾರಂತೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಅದನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಬೆದರಿಕೆಗಳಿಗೆ ನಾನು ಹೆದರುವವಳಲ್ಲ. ಸಿ.ಟಿ. ರವಿಯನ್ನು ಕೊಲೆ ಮಾಡಿದರೆ ನಾನು ಉಳಿಯುತ್ತೇನೆ. ನನ್ನ ಕೊಲೆ ಮಾಡಿದರೆ ಸಿಟಿ ರವಿ ಉಳಿಯುತ್ತಾರೆ. ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಕೊಲೆ ಮಾಡುವವರು ಎಲ್ಲಿದ್ದರೂ, ಕೊಲೆ ಮಾಡುತ್ತಾರೆ. ಹಾಗಾಗಿ ನಾನು ಹೆದರಿಕೆಯಿಲ್ಲದೆ ಸಮಾರಂಭದಲ್ಲಿ ಪಾಲ್ಗೊಂಡಿದ್ದೇನೆ ಎಂದು ಲಲಿತಾ ನಾಯಕ್ ಹೇಳಿದರು.
ಬ್ರಾಹ್ಮಣ ಹುಡುಗಿಯರು ಅಂತರ್ಜಾತಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನು ತಡೆಯಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಎಚ್.ಎಂ. ರೇವಣ್ಣ ಅವರು ಕೂಡ ಬ್ರಾಹ್ಮಣ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಾರೆ. ಅವರು ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಬ್ರಾಹ್ಮಣ ಸಮುದಾಯದವರು ಹೆಣ್ಣು ಮಕ್ಕಳು ಋತುಮತಿಯಾದ ವೇಳೆ ಕಣ್ಣಿಗೆ ಬಟ್ಟೆ ಕಟ್ಟಿ ಕಾಡಿಗೆ ಬಿಡುತ್ತಿದ್ದರು. ಆಗ ಅಲೆಮಾರಿ ಸಮುದಾಯ ಅವರನ್ನು ಮದುವೆ ಆಗುತ್ತಿದ್ದರು. ಈಗ ಅಂತರ್ಜಾತಿ ವಿವಾಹಗಳು ಪ್ರೀತಿ ಆಧಾರದ ಮೇಲೆ ನಡೆಯುತ್ತಿವೆ. ಪ್ರೀತಿ ಇರೋದ್ರಿಂದ ಜಾತಿ ಮೀರಿ ಮದುವೆಗಳಾಗುತ್ತಿವೆ. ಇದನ್ನು ಸ್ವಾಮೀಜಿ ಅರ್ಥ ಮಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
A letter has reached Lalitha Naik a social activist stating to Kill her along with Minister CT Ravi and Public Tv Ranganath on May 1st, 2021.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm