ನನ್ನ ಫೋನ್ ಟ್ರ್ಯಾಪ್ ಮಾಡುತ್ತಿದ್ದಾರೆ; ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆರೋಪ

21-08-20 03:42 pm       Bangalore Correspondent   ಕರ್ನಾಟಕ

ನನ್ನ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಫೋನ್​ ಕರೆಗಳು ಬರುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.

ಮಂಗಳೂರು, ಆಗಸ್ಟ್ 21: ಕಾಂಗ್ರೆಸ್- ಜೆಡಿಎಸ್​ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆ ಆರೋಪ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ವಿಷಯವಾಗಿ ಮೂರೂ ಪಕ್ಷಗಳು ಕೆಸರೆರಚಾಟ ಮಾಡಿಕೊಂಡಿದ್ದವು. ಇದೀಗ ಫೋನ್ ಕದ್ದಾಲಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪ ಮಾಡಿದ್ದಾರೆ.

ನನ್ನ ಫೋನ್ ಟ್ಯಾಪಿಂಗ್ ಆಗುತ್ತಿದೆ. ಇಲ್ಲಿಯವರೆಗೆ ಚೆನ್ನಾಗಿತ್ತು, ಇವತ್ತು ಬೆಳಗ್ಗೆಯಿಂದ ಫೋನ್​ ಕರೆಗಳು ಬರುತ್ತಿಲ್ಲ. ಇವತ್ತು ಇದರ ಬಗ್ಗೆ ದೂರು ಕೊಡುತ್ತೇನೆ. ನಮ್ಮ ಸುದರ್ಶನ್ ನನಗೆ 25 ಬಾರಿ ಕಾಲ್ ಮಾಡಿದ್ದಾರೆ. ಆದರೆ ಒಮ್ಮೆಯೂ ನನಗೆ ಕಾಲ್ ಬಂದಿಲ್ಲ. ನನ್ನ ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರರಷ್ಟು ಸತ್ಯ. ಈ ಹಿಂದೆಯೂ ನನ್ನ ಫೋನ್ ಟ್ಯಾಪಿಂಗ್ ಆಗಿತ್ತು, ಈಗ ಮತ್ತೆ ಆಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.