ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm