ಕೊರೊನಾ 2ನೇ ಅಲೆ ; ಯುಗಾದಿ, ಹೋಳಿ, ಗುಡ್ ಫ್ರೈಡೇ ಹಬ್ಬಗಳ ಆಚರಣೆಗೆ ಮಾರ್ಗಸೂಚಿ ಪ್ರಕಟ

26-03-21 10:17 am       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ

ಬೆಂಗಳೂರು, ಮಾ 26: ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮುಂದಿನ ಹಬ್ಬ, ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟವಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ.

ಅಂತೆಯೇ, ಯುಗಾದಿ, ಹೋಳಿ, ಶಬ್ ಎ ಬರತ್, ಗುಡ್ ಫ್ರೈಡೇ ಮುಂತಾದ ಎಲ್ಲಾ ಹಬ್ಬ ಹರಿದಿನಗಳಲ್ಲಿ ಗುಂಪುಗೂಡದಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. 

ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್​, ಮಾರ್ಕೆಟ್​ ಹಾಗೂ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದಲ್ಲದೆ, ಆದೇಶ ಉಲ್ಲಂಘಿಸಿದರೆ ಎನ್​ಡಿಎಂಎ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು ಎಂದು ಕ್ರಮಕೈಗೊಳ್ಳುವುದಾಗಿ ರಾಜ್ಯ ಸರ್ಕಾರದಿಂದ ಎಚ್ಚರಿಕೆ ನೀಡಲಾಗಿದೆ.

‘ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ’

Over Half of Mumbai's Slum Dwellers May Have Had Covid-19. Here's Why Herd  Immunity Could be Far

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಲಂ, ಬಡವರು ವಾಸಿಸುವ ಪ್ರದೇಶಗಳಿಗೆ ಲಸಿಕೆ ತಲುಪಿಸಿ ಎಂದು ಹೈಕೋರ್ಟ್ ಸೂಚನೆ ಕೊಟ್ಟಿದೆ. ಕಟ್ಟಡ ಕಾರ್ಮಿಕರಿರುವ ಕಡೆಯೂ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೋರ್ಟ್​ ಸೂಚಿಸಿದೆ. ಕೈಗೊಂಡ ಕ್ರಮಗಳ ಬಗ್ಗೆ ಮಾ.31ಕ್ಕೆ ವಿವರ ನೀಡಲು ಸೂಚನೆ ನೀಡಲಾಗಿದೆ.

‘ಸರ್ಕಾರದ ಮಾರ್ಗಸೂಚಿ‌ ಕಡ್ಡಾಯವಾಗಿ ಪಾಲಿಸಬೇಕು’

Karnataka to get private hospitals to test, treat Covid-19 patients at  capped prices

ಮಹಾರಾಷ್ಟ್ರದಲ್ಲಿ ದಿನೇದಿನೆ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ‌ ಕಡ್ಡಾಯವಾಗಿ ಪಾಲಿಸಬೇಕು. ಮಾರ್ಗಸೂಚಿ ಪಾಲನೆಯಲ್ಲಿ ಯಾವುದೇ ರೀತಿ ರಾಜಿ ಇಲ್ಲ. ಮಾರ್ಗಸೂಚಿ ಉಲ್ಲಂಘಿಸಿದವರ ವಿರುದ್ಧ ಅಷ್ಟೇ ಕ್ರಮ ಅಲ್ಲ ಅದಕ್ಕೆ ಕಾರಣರಾದವರ ವಿರುದ್ಧವೂ ಕ್ರಮಕ್ಕೆ ಆದೇಶಿಸಿದ್ದೇನೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಹೇಳಿದ್ದಾರೆ.

In light of the surge in COVID-19 cases in Karnataka, the state government has announced that public gatherings for upcoming festivals such as Holi, Shab-e-Barat and Good Friday will be prohibited across the state.