ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್‌ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್‌ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್‌ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್‌ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್‌ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್‌ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್‌ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್‌ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್‌ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm