ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳು ಈ ಬಾರಿಯೂ ಪರೀಕ್ಷೆಯಿಲ್ಲದೇ ಪಾಸ್

28-03-21 05:47 pm       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ. 

ಬೆಂಗಳೂರು, ಮಾ.28: ಕೊರೊನಾ ವೈರಸ್ 2ನೇ ಅಲೆ ಆತಂಕವನ್ನು ತಂದೊಡ್ಡಿರುವಾಗಲೇ ರಾಜ್ಯದಲ್ಲಿ ಒಂದರಿಂದ 9ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ಸರಕಾರ ನಿರ್ಧರಿಸಿದೆ. 

ಕೊನೆಯ ಪರೀಕ್ಷೆಯನ್ನು ಮಾಡಬೇಕೇ, ಬೇಡವೇ ಎನ್ನವುದರ ಬಗ್ಗೆ ಶಿಕ್ಷಣ ಸಚಿವರು ತಜ್ಞರ ಜೊತೆ ಚರ್ಚಿಸಿ ನಿರ್ಧರಿಸಲಿದ್ದಾರೆ. ಈ ಕುರಿತು ಶಿಕ್ಷಣ ಸಚಿವರ ಜೊತೆ ಮಾತನಾಡುತ್ತೇನೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸುತ್ತೇವೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರೈಮರಿ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳನ್ನ ಪರೀಕ್ಷೆ ಇಲ್ಲದೇ ಪಾಸ್ ಮಾಡಬೇಕು ಎನ್ನುವ ಅಭಿಪ್ರಾಯಗಳಿವೆ.

ಗೃಹ ಸಚಿವರು, ಕಂದಾಯ ಸಚಿವರು ಹಾಗು ಶಿಕ್ಷಣ ಸಚಿವರ ಜೊತೆಗೂ ಚರ್ಚೆ ಮಾಡುತ್ತೇವೆ. ಕಳೆದ ನಾಲ್ಕು ವಾರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ರಾಜ್ಯದಲ್ಲಿ ಹೆಚ್ಚಳವಾಗಿದೆ. ಈ ಬಗ್ಗೆ ತೆಗೆದುಕೊಂಡಿರುವ ಕ್ರಮ ಸಾಕಾಗುತ್ತಿಲ್ಲ. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಂಗಳೂರಿಗೆ ಬರುವವರ ಬಗ್ಗೆ ನಿಗಾ ಇಡಬೇಕೆಂದು ಈಗಾಗ್ಲೇ ಸೂಚನೆ ನೀಡಿದ್ದೇವೆ. ಆದರೆ, ಹರಡುವಿಕೆಯನ್ನು ತಪ್ಪಿಸಲು ಜನರೇ ಜಾಗೃತಿ ವಹಿಸಬೇಕು ಎಂದು ಅವರು ಹೇಳಿದ್ದಾರೆ.