ಬ್ರೇಕಿಂಗ್ ನ್ಯೂಸ್
02-04-21 01:16 pm Mangalore Correspondent ಕರ್ನಾಟಕ
ಮಂಗಳೂರು, ಎ.2: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಆ ಬಗ್ಗೆ ಈಶ್ವರಪ್ಪ ಅವರಲ್ಲಿ ಮಾತುಕತೆ ನಡೆಸುತ್ತೇವೆ. ಅಸಮಾಧಾನ ಬಗೆಹರಿಸ್ತೀವಿ ಎಂದು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ನಳಿನ್ ಕುಮಾರ್, ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ಅವರ ಜೊತೆಗೆ ಇನ್ನೆರಡು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ಇಲಾಖೆಯ ವಿಚಾರದ ಬಗ್ಗೆ ಅಸಮಾಧಾನ ಇರುವುದನ್ನು ಬಗೆಹರಿಸ್ತೀವಿ. ಎರಡು ದಿನಗಳಲ್ಲಿ ಎಲ್ಲವೂ ಸರಿಯಾಗುವುದು. ಈಗ ಎಲ್ಲರೂ ಚುನಾವಣೆಯ ಬಿಝಿಯಲ್ಲಿದ್ದಾರೆ. ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಜಯ ಗಳಿಸಲಿದೆ ಎಂದಿದ್ದಾರೆ.
ಕಾಂಗ್ರೆಸಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಜಂಗೀ ಕುಸ್ತಿ ಆಗ್ತಾ ಇದೆ. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಡಿಕೆಶಿಯವರ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಿಜೆಪಿಯವರ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ನಳಿನ್, ಸಿಡಿ ಪ್ರಕರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಸಿಡಿ ಪ್ರಕರಣ ನ್ಯಾಯಾಲಯದಲ್ಲಿದೆ. ಇದರ ಜೊತೆಗೆ ತನಿಖೆಯೂ ನಡೆಯುತ್ತಿದೆ. ಇಂಥ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದರು.
Read: ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ; ಯಡಿಯೂರಪ್ಪ ವಿರೋಧಿ ಬಣದ ಹೊಸ ದಾಳ ! ಬಿಜೆಪಿಗೆ ಮತ್ತೆ ಇಕ್ಕಟ್ಟು
We will discuss with Eshwarappa on Complaint To Governor Against BS Yediyurappa stated Naleen Kumar kateel at the press meet held in Bangalore.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm