ಬ್ರೇಕಿಂಗ್ ನ್ಯೂಸ್
02-04-21 03:06 pm Headline Karnataka News Network ಕರ್ನಾಟಕ
ಬೆಂಗಳೂರು, ಎ.2: ಇತ್ತೀಚಿನ ವರ್ಷಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಗಾಲದ ಸಂದರ್ಭ ಭೂಕುಸಿತಗಳಾಗುತ್ತಿರುವುದಕ್ಕೆ ಪಶ್ಚಿಮ ಘಟ್ಟಗಳಲ್ಲಿ ಅರಣ್ಯ ನಾಶ ಮತ್ತು ಅರಣ್ಯ ಭಾಗದಲ್ಲಿ ಭೂಮಿಯನ್ನು ಅಗೆದಿರುವುದೇ ಕಾರಣ ಎಂದು ಕರ್ನಾಟಕ ಜೈವವೈವಿಧ್ಯ ಮಂಡಳಿಯ ತಜ್ಞರ ಸಮಿತಿ ರಾಜ್ಯ ಸರಕಾರಕ್ಕೆ ವರದಿ ನೀಡಿದೆ.
ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಆಶೀಸರ ನೇತೃತ್ವದ ಸಮಿತಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರ್ನು ಭೇಟಿಯಾಗಿ ಈ ಬಗ್ಗೆ ವರದಿಯನ್ನು ನೀಡಿದೆ. ಕೇಂದ್ರ ಸರಕಾರ ನೀಡುವ ಮಿಟಿಗೇಶನ್ ಫಂಡ್ ಮೂಲಕ ಭೂಕುಸಿತದ ಪ್ರದೇಶಗಳಲ್ಲಿ ಪುನರ್ ನಿರ್ಮಾಣ ಕಾರ್ಯಗಳಿಗೆ ಅನುದಾನ ಒದಗಿಸುವುದು ಮತ್ತು ವರದಿಯಲ್ಲಿ ಮಾಡಲಾಗಿರುವ ಶಿಫಾರಸುಗಳ ಅನುಷ್ಠಾನಕ್ಕೆ ಸರಕಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ವಿಕೋಪ ನಿಯಂತ್ರಣ ಪ್ರಾಧಿಕಾರದ ನೇತೃತ್ವದಲ್ಲಿ ಕಾರ್ಯಕ್ರಮಗಳನ್ನು ರೂಪಿಸಬೇಕು. ಇವುಗಳ ಜಾರಿಗೆ ಅಗತ್ಯವಿರುವ ತಾಂತ್ರಿಕ ಮಾಹಿತಿಗಳನ್ನು ನೀಡುವ ನೋಡಲ್ ಸಂಸ್ಥೆಯಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವನ್ನು ಗುರುತಿಸಬೇಕು. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭೂಕುಸಿತದ ಸಾಧ್ಯತೆ ಇರುವ ಪ್ರದೇಶಗಳನ್ನು ಗುರುತಿಸಿ, ಗ್ರಾಮ ಮಟ್ಟದ ನಕ್ಷೆ ರಚಿಸುವುದು.
ಭೂಕುಸಿತದ ಬಗ್ಗೆ ಮೊದಲೇ ಅಪಾಯದ ಮುನ್ಸೂಚನೆ ನೀಡುವ ತಾಂತ್ರಿಕ ವ್ಯವಸ್ಥೆಯನ್ನು ರೂಪಿಸುವುದು, ಜಿಲ್ಲಾಡಳಿತಗಳು ಸಕಲಾದಲ್ಲಿ ಅವುಗಳ ಸಹಾಯ ಪಡೆಯುವಂಥ ಆಡಳಿತಾತ್ಮಕ ನೀತಿ ರೂಪಿಸುವುದು, ಮಲೆನಾಡು ಮತ್ತು ಕರಾವಳಿ ಭಾಗದ ಭೂಕುಸಿತ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಸ್ಥಳೀಯರ ಸಹಕಾರ ಪಡೆದು ಮರ, ಗಿಡಗಳನ್ನು ನೆಟ್ಟು ಕಾಡು ಬೆಳೆಸಲು ಒತ್ತು ಕೊಡುವುದು ಇತ್ಯಾದಿ ಶಿಫಾರಸುಗಳನ್ನು ತಜ್ಞರ ಸಮಿತಿ ಮಾಡಿದೆ.
ಆದರೆ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಕೊಡಗು ಭಾಗದಲ್ಲಿ ಭೂಕುಸಿತ ಆಗಿರುವುದಕ್ಕೆ ನೈಜ ಕಾರಣ ಎನ್ನಲಾಗುತ್ತಿರುವ ಎತ್ತಿನಹೊಳೆ ಯೋಜನಾ ಪ್ರದೇಶದಲ್ಲಿ ಅನಿಯಮಿತವಾಗಿ ಸಹಜ ಅರಣ್ಯವನ್ನು ಅಗೆದು ಹಾಕಿರುವ ವಿಚಾರವನ್ನು ತಜ್ಞರ ತಂಡ ವರದಿಯಲ್ಲಿ ಉಲ್ಲೇಖ ಮಾಡಿಲ್ಲ. ಪರಿಸರ ತಜ್ಞರು, ಅಧ್ಯಯನ ನಡೆಸಿದ ಬೇರೆ ಬೇರೆ ವಿಭಾಗದ ವಿಜ್ಞಾನಿಗಳು ಈ ಭಾಗದಲ್ಲಿ ಪ್ರತಿವರ್ಷ ಬೆಟ್ಟಗಳು ಕುಸಿಯುತ್ತಿರುವುದಕ್ಕೆ ಸಕಲೇಶಪುರ ಭಾಗದಲ್ಲಿ ಎತ್ತಿನಹೊಳೆ ಯೋಜನೆ ಹೆಸರಲ್ಲಿ ಬೆಟ್ಟಗಳ ತುದಿಯನ್ನು ಅಗೆದು ಅಣೆಕಟ್ಟು ಕಟ್ಟಿದ್ದೇ ಕಾರಣ ಎನ್ನುವ ಅಂಶವನ್ನು ಹೇಳಿದ್ದಾರೆ.
ಇದೇ ವಿಚಾರವನ್ನು ಅರಣ್ಯ ನಾಶ, ಬೆಟ್ಟ ಅಗೆದಿದ್ದು ಕಾರಣ ಎನ್ನುವ ಮೂಲಕ ಸರಕಾರದ ಜೀವವೈವಿಧ್ಯ ಮಂಡಳಿಯ ತಜ್ಞರು ತಿಪ್ಪೆ ಸಾರಿಸುವ ಕೆಲಸ ಮಾಡಿದ್ದಾರೆ. ಸಾವಿರಾರು ಎಕ್ರೆ ಪ್ರದೇಶದಲ್ಲಿ ಬೃಹತ್ ಪ್ರಮಾಣದಲ್ಲಿ ಬೆಟ್ಟ ಅಗೆದು, ಅರಣ್ಯ ನಾಶ ಮಾಡಿದ್ದು, ಅಲ್ಲಿನ ಸಹಜ ಅರಣ್ಯವನ್ನು ಹಾಳುಗೆಡವಿದ್ದು ಮಳೆಯಾಗುವ ಸಂದರ್ಭದಲ್ಲಿ ಮಳೆನೀರು ನೇರವಾಗಿ ಅಲ್ಲಿ ಇಂಗುವ ಮೂಲಕ ಬೇರೊಂದು ಕಡೆ ಒಡೆದು ಬರುತ್ತಿರುವುದೇ ಭೂಕುಸಿತಕ್ಕೆ ಕಾರಣ ಎನ್ನುವ ಅಂಶವನ್ನು ಖಾಸಗಿ ಅಧ್ಯಯನಕಾರರು ಬೊಟ್ಟು ಮಾಡಿದ್ದಾರೆ.
Extreme landslides in Karvali region are due to the Yettinahole reservoir says reports geology department top officials.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm