ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm