ಬ್ರೇಕಿಂಗ್ ನ್ಯೂಸ್
05-04-21 01:07 pm Headline Karnataka News Network ಕರ್ನಾಟಕ
ಬೆಳಗಾವಿ,ಎ.5: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ವಿವರಣೆ ನೀಡಿದ್ದು, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ರಾತ್ರಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶುಗರ್, ಬಿಪಿಯಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊವಿಡ್ ನಿಯಮದಂತೆ ಇನ್ನೂ 5 ದಿನ ಆಸ್ಪತ್ರೆಯಲ್ಲಿರಬೇಕು ಎಂದು ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಏಪ್ರಿಲ್ ಒಂದರಂದೇ ಕೊವಿಡ್ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಲ್ಲಿಯ ವೈದ್ಯ ಡಾ.ರವೀಂದ್ರ ಅಂಟೀನ್ ಹೇಳಿದ್ದಾರೆ.
ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ;
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಲಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದು, ಮಾಜಿ ಸಚಿವರ ಕಾರು ಚಾಲಕ ಹಾಗೂ ಅಡುಗೆ ಭಟ್ಟ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್ ಜಾರಕಿಹೊಳಿ
ಇದೀಗ ರಮೇಶ್ ಜಾರಕಿಹೊಳಿ ಕಾರು ಚಾಲಕ ಹಾಗೂ ಅಡುಗೆ ಭಟ್ಟನಿಗೂ ಕೊರೊನಾ ಬಂದಿದ್ದು, ಅವರ ಆಪ್ತ ವರ್ಗದಲ್ಲಿದ್ದವರೆಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗಬೇಕಾಗಬಹುದಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಸದ್ಯ ಕೊರೊನಾ ಪಾಸಿಟಿವ್ ಬಂದಿರುವುದರಿಂದಾಗಿ ರಮೇಶ್ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಗೈರಾಗಲಿದ್ದಾರೆ. ಇನ್ನೊಂದೆಡೆ ರಮೇಶ್ ಜಾರಕಿಹೊಳಿಯವರ ನಿವಾಸದಿಂದ ಕೂಗಳತೆ ದೂರದಲ್ಲಿರುವ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯರು ರಮೇಶ್ ಜಾರಕಿಹೊಳಿಗೆ ಇನ್ನೂ ಐದರಿಂದ ಹತ್ತು ದಿನಗಳ ಕಾಲ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲು ಯೋಚಿಸಿದ್ದಾರೆ. ಆದ ಕಾರಣ ಹತ್ತು ಹದಿನೈದು ದಿನಗಳವರೆಗೆ ರಮೇಶ್ ಜಾರಕಿಹೊಳಿ ಬೆಂಗಳೂರಿನ ಕಡೆ ತಲೆ ಹಾಕುವ ಸಂಭವ ಕಡಿಮೆ ಇದ್ದು, ಎಸ್ಐಟಿ ತನಿಖೆಯಿಂದಲೂ ತಾತ್ಕಾಲಿಕ ವಿನಾಯಿತಿ ಪಡೆಯುವ ಸಾಧ್ಯತೆ ದಟ್ಟವಾಗಿದೆ.
Former Karnataka Minister and Bharatiya Janata Party (BJP) leader Ramesh Jarkiholi has tested positive for coronavirus. Ramesh Jarkiholi, who is in Bengaluru, is self-quarantining after his test result for the coronavirus infection came back as positive.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm