ಖಾಸಗಿ ಟುಟೋರಿಯಲ್​ ನಡೆಸುವವರ ವಿರುದ್ಧ ಸೂಕ್ತ ಕ್ರಮ ; ಶಿಕ್ಷಣ ಸಚಿವ ಸುರೇಶ್

05-04-21 06:20 pm       Headline Karnataka News Network   ಕರ್ನಾಟಕ

ಖಾಸಗಿ ಟುಟೋರಿಯಲ್​ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು,ಎ.5 : ರಾಜ್ಯದಲ್ಲಿ ಖಾಸಗಿ ಟುಟೋರಿಯಲ್​ ನಡೆಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಎಚ್ಚರಿಕೆ ನೀಡಿದ್ದಾರೆ.

ಶಿಕ್ಷಣ ಇಲಾಖೆ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಈ ಹಿಂದೆ ನಡೆಯುತ್ತಿದ್ದ ತರಗತಿಗಳನ್ನು  ಏಪ್ರಿಲ್​​ 20ರವೆರೆಗೆ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ 1-9ರವರೆಗೆ ಪರೀಕ್ಷೆ ನಡೆಯಬೇಕು ಬೇಡವೋ ಎನ್ನುವುದರ ಬಗ್ಗೆ ದೊಡ್ಡ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಅಭಿಪ್ರಾಯ ತಿಳಿಯಲು ಇಂದು ಸಭೆ ನಡೆಸಲಾಗಿದ್ದು, ಇಲಾಖೆ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ದರು.ಅವರೆಲ್ಲರೂ ಕೂಡ ಯಾವುದಾದರೂ ಒಂದು ರೀತಿಯಲ್ಲಿ ವಿದ್ಯಾರ್ಥಿಯ ಕಲಿಕೆಯ ಮೌಲ್ಯಾಂಕನ ಮುಖ್ಯ ಎಂದು ಅಭಿಪ್ರಾಯ ನೀಡಿದ್ದಾರೆ ಎಂದರು.

ಇನ್ನು ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಲು  ಶಿಕ್ಷಣ ತಜ್ಞರು ನಮಗೆ ಮುಂದಿರುವ ದಾರಿಯನ್ನು ವಿವರಿಸಿದ್ದಾರೆ. ಈ ಹಿನ್ನೆಲೆ ಎಲ್ಲರ ಅಭಿಪ್ರಾಯ ಪಡೆಯಲಾಗಿದೆ. ಪೋಷಕರು ಕೂಡ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಇನ್ನೆರಡು ದಿನಗಲಲ್ಲಿ ನಮ್ಮ ಇಲಾಖೆಯ ಅಧಿಕಾರಿಗಳು ಸಭೆ ನಡೆಸಿ ಇವತ್ತು ಬಂದಿರುವ ಅಭಿಪ್ರಾಯದಿಂದ ಸೂಕ್ತ ಆದೇಶವನ್ನು ಹೊರಡಿಸುತ್ತೇವೆ ಎಂದರು.

ಇನ್ನು ನಮ್ಮ ತರಗತಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಆದರೆ ಕಲವರು ಖಾಸಗಿ ಟುಟೋರಿಯಲ್ ನಡೆಸುತ್ತಿದ್ದಾರೆ ಎಂಬ ದೂರು ಸಹ ಕೇಳಿ ಬಂದಿದೆ. ಅಂತವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.