ಬ್ರೇಕಿಂಗ್ ನ್ಯೂಸ್
06-04-21 07:32 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 06: ಕರ್ನಾಟಕದಲ್ಲಿ ಕೊರೊನಾವೈರಸ್ ಹರಡುವಿಕೆಯು ಕಡಿವಾಣ ಕಳೆದುಕೊಳ್ಳುತ್ತಿದೆ. ಪ್ರತಿನಿತ್ಯ ದಾಖಲಾಗುತ್ತಿರುವ ಸೋಂಕಿತ ಪ್ರಕರಣಗಳ ಸಂಖ್ಯೆ ಹೊಸ ದಾಖಲೆಗಳನ್ನು ಬರೆಯುತ್ತಿದ್ದು, ರಾಜ್ಯದ ಜನರ ಎದೆಯಲ್ಲಿ ನಡುಕ ಹುಟ್ಟಿಸುವಂತೆ ಮಾಡಿದೆ.
ಕಳೆದ 24 ಗಂಟೆಗಳಲ್ಲಿ 6150 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 39 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 3487 ಸೋಂಕಿತರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಒಟ್ಟು 1026584ಕ್ಕೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 968762 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 12696 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 45107 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?

ರಾಜ್ಯದಲ್ಲಿ ಒಟ್ಟು 6150 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 18, ಬಳ್ಳಾರಿ 87, ಬೆಳಗಾವಿ 47, ಬೆಂಗಳೂರು ಗ್ರಾಮಾಂತರ 80, ಬೆಂಗಳೂರು 4266, ಬೀದರ್ 167, ಚಾಮರಾಜನಗರ 5, ಚಿಕ್ಕಬಳ್ಳಾಪುರ 16, ಚಿಕ್ಕಮಗಳೂರು 29, ಚಿತ್ರದುರ್ಗ 21, ದಕ್ಷಿಣ ಕನ್ನಡ 89, ದಾವಣಗೆರೆ 47, ಧಾರವಾಡ 43, ಗದಗ 12, ಹಾಸನ 110, ಹಾವೇರಿ 5, ಕಲಬುರಗಿ 261, ಕೊಡಗು 22, ಕೋಲಾರ 56, ಕೊಪ್ಪಳ 20, ಮಂಡ್ಯ 102, ಮೈಸೂರು 237, ರಾಯಚೂರು 29, ರಾಮನಗರ 14, ಶಿವಮೊಗ್ಗ 49, ತುಮಕೂರು 157, ಉಡುಪಿ 57, ಉತ್ತರ ಕನ್ನಡ 66, ವಿಜಯಪುರ 22, ಯಾದಗಿರಿ 16 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.
Karnataka on Tuesday reported over 6,000 new Covid-19 cases in the last 24 hours, its highest single-day spike this year. The state reported 5,279 new Covid-19 cases yesterday, its second-highest count this year.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm