ಮುಂದಿನ ನಾಲ್ಕೈದು ದಿನಗಳಲ್ಲಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

12-04-21 10:45 pm       Headline Karnataka News Network   ಕರ್ನಾಟಕ

ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ, ಅಂದರೆ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬೆಂಗಳೂರು, ಎ 12: ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ, ಅಂದರೆ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ  ಮಳೆ ಸುರಿಯುವ ಸಾಧ್ಯತೆಯಿದೆ.

Heavy rain likely in parts of Karnataka this week | Deccan Herald

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚೆಂದರೆ 34 ಡಿಗ್ರಿ ತಾಪಮಾನ ದಾಖಲಾಗಬಹುದು, ಅತಿ ಕಡಿಮೆಯೆಂದರೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

Karnataka Rains and Flood Live News And Updates: Moderate to heavy rains to  continue in Coastal Karnataka today | Skymet Weather Services

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನಸಾಮಾನ್ಯರು ಬೆವರಿ ಬಳಲುತ್ತಿದ್ದಾರೆ. ಸುಡು ಬಿಸಿಲಿಗೆ ಕಂಗಾಲಾಗಿ ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

Heavy Rains Wreak Havoc, Disrupt Regular Life in North Karnataka Districts  | The Weather Channel - Articles from The Weather Channel | weather.com

ಮಾರ್ಚ್​ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್​ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್​ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿದೆ. ಹೀಗೆಯೇ ಏಪ್ರಿಲ್​ನಲ್ಲಿಯೂ ತಾಪಮಾನ ಏರುತ್ತಲೇ ಸಾಗಿತ್ತು. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಮಳೆ ಸುರಿದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Weather forecast has started that heavy rains will be seen in Karnatakas few district by April 13th to 15th.