ಬ್ರೇಕಿಂಗ್ ನ್ಯೂಸ್
15-04-21 11:48 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಎ.15: ಸಿದ್ದರಾಮಯ್ಯ, ಯಡಿಯೂರಪ್ಪ, ನರೇಂದ್ರ ಮೋದಿಯವರನ್ನು ನಾಯಕರೆಂದು ಒಪ್ಪಿಕೊಳ್ಳಬಹುದು. ಆದರೆ, ರಾಹುಲ್ ಗಾಂಧಿ, ಪ್ರಿಯಾಂಕ ಅಥವಾ ಸೋನಿಯಾ ಗಾಂಧಿಯನ್ನು ಲೀಡರ್ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮಕ್ಕೆ ಮಾತನಾಡಿದ ಅವರು, ಕಾಂಗ್ರೆಸ್ಸಿನವರು ಕೇರಳದಲ್ಲಿ ಕಮ್ಯುನಿಸ್ಟರನ್ನು ವಿರೋಧಿಸಿ, ತಮಿಳುನಾಡು, ಪ. ಬಂಗಾಳದಲ್ಲಿ ಅವರ ಜೊತೆಯೇ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ಕಾಂಗ್ರೆಸ್‍ನದ್ದು ನಿರ್ದಿಷ್ಟ ಸಿದ್ಧಾಂತವಾಗಲೀ, ಬದ್ಧತೆಯಾಗಲೀ ಇಲ್ಲದ ಎಡಬಿಡಂಗಿತನ ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ನಾಯಕರು ಒಂದು ಕುಟುಂಬದ ನಾಯಕತ್ವವನ್ನ ಒಪ್ಪಿಕೊಳ್ಳಬೇಕೆಂದು ಬಯಸುತ್ತಾರೆ. ಆದರೆ, ಜನ ಒಪ್ಪಲ್ಲ. ಕಾಂಗ್ರೆಸ್‍ಗೆ ರಾಷ್ಟ್ರ ಮಟ್ಟದಲ್ಲಿ ನಾಯಕತ್ವ ಇಲ್ಲದೆ, ಆ ಪಕ್ಷ ಮುಳುಗುತ್ತಿರುವ ಹಡಗಿನಂತಾಗಿದೆ. ಅಲ್ಲಿರೋದು ಕುಟುಂಬ ನಾಯಕತ್ವ ಮಾತ್ರ ಎಂದು ಸಿ.ಟಿ. ರವಿ ಟೀಕಿಸಿದರು.
ಲಾಕ್ ಡೌನ್ ಮಾಡೋದಾದರೆ ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಲಿ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯ ಬಗ್ಗೆ ಕಿಡಿಕಾರಿದ ಅವರು, ಮಾಜಿ ಸಿಎಂ ಸರ್ಕಾರದ ಖಜಾನೆಯನ್ನ ಭರ್ತಿ ಮಾಡಿ ಹೋಗಿಲ್ಲ. ಖಾಲಿ ಮಾಡಿ ಹೆಚ್ಚುವರಿ ಸಾಲ ಮಾಡಿ ಹೋಗಿದ್ದಾರೆ. ವಿಜಯನಗರದ ಅರಸರಂತೆ ಚಿನ್ನ- ಬೆಳ್ಳಿಯನ್ನ ರಸ್ತೆಯಲ್ಲಿ ಮಾರುವಂತಹ ಶ್ರೀಮಂತಿಕೆ ತುಂಬಿಸಿ ಹೋಗಿದ್ದರೆ ಈ ರೀತಿ ಹೇಳಬಹುದಿತ್ತು. ಅವರ ಮನೆ ಖಜಾನೆ ತುಂಬಿಸಿಕೊಂಡು ಹೋದರು. ಪಾರ್ಟಿ ಖಜಾನೆ ತುಂಬಿಸಿ, ರಾಜ್ಯದ ಖಜಾನೆ ಖಾಲಿ ಮಾಡಿ ಹೋಗಿದ್ದಾರೆ. ಅವರು ಇದ್ದಾಗ ಏನೇನು ಕೊಟ್ಟರು ಎನ್ನುವುದರ ಪಟ್ಟಿ ನಮ್ಮ ಬಳಿ ಇದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದರು.
ಲೋಕಸಭೆ ಚುನಾವಣೆ ವೇಳೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಬಂದು ಕನಕಪುರದಲ್ಲಿ ಪ್ರಚಾರ ಮಾಡಿದರೆ, ಅಲ್ಲಿಯೂ ಗೆಲುತ್ತಿದ್ದೆವು. ನಮ್ಮ ಪೂರ್ವ ತಯಾರಿಯ ಕೊರತೆಯಿಂದ ಆ ಒಂದು ಕ್ಷೇತ್ರ ಕಾಂಗ್ರೆಸ್‍ನವರು ಗೆದ್ದರು ಅಷ್ಟೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ವತಃ ಮಲ್ಲಿಕಾರ್ಜುನ ಖರ್ಗೆಯೇ ಗೆಲ್ಲಲಿಲ್ಲ. ರಾಹುಲ್ ನೇತೃತ್ವದಲ್ಲಿ ಯಾವ ಚುನಾವಣೆ ಗೆದ್ದಿದ್ದಾರೆ ಎಂದು ಎಂದು ಸಿ.ಟಿ ರವಿ ಪ್ರಶ್ನಿಸಿದ್ದಾರೆ.
ರಾಹುಲ್ ನೇತೃತ್ವದ ಚುನಾವಣೆಯಲ್ಲಿ ರಾಜ್ಯದಲ್ಲಿ ಸಿಕ್ಕಿದ್ದು ಒಂದೇ ಕ್ಷೇತ್ರ. ಬಲವಾದ ಅಭ್ಯರ್ಥಿ ಹಾಕಿ ಪ್ರಚಾರ ನಡೆಸಿದ್ದರೆ ಅದನ್ನೂ ನಾವು ಬಿಡ್ತಿರ್ಲಿಲ್ಲ ಎಂದು ಕಾಂಗ್ರೆಸ್ ನಾಯಕರ ವೈಫಲ್ಯದ ವಿರುದ್ಧ ಲೇವಡಿ ಮಾಡಿದ್ದಾರೆ.
Chikmagalur we can agree that siddaramaiah is a strong leader but not Rahul mocks ct Ravi.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm