ಬ್ರೇಕಿಂಗ್ ನ್ಯೂಸ್
15-04-21 05:37 pm Headline Karnataka News Network ಕರ್ನಾಟಕ
ಬೆಂಗಳೂರು,ಏ.15 : ಕುಂಭಮೇಳದ ಪವಿತ್ರ ಸ್ನಾನಕ್ಕೆ ಕರ್ನಾಟಕದಿಂದಲೂ ಭಕ್ತರು ತೆರಳಿದ್ದಾರೆ. ಕುಂಭಮೇಳದಲ್ಲಿ ಕೊರೊನಾ ಸೋಂಕಿತರು ಭಾಗವಹಿಸುವುದು ಕಂಡುಬಂದಿದೆ. ಅವರೆಲ್ಲರೂ ಕರ್ನಾಟಕಕ್ಕೆ ಬಂದ ಮೇಲೆ ಪ್ರತ್ಯೇಕ ವಾಸ ಮಾಡಿ, ಕೊರೊನಾ ಟೆಸ್ಟ್ ಮಾಡಿಸಬೇಕು. ಕೊರೊನಾ ನೆಗೆಟಿವ್ ಬಂದರೆ ಸರಿ, ಇಲ್ಲದಿದ್ದರೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ದೆಹಲಿ ಮತ್ತಿತರ ಕಡೆ ಜಾರಿಗೊಳಿಸಿದ ವಾರಾಂತ್ಯದ ಕರ್ಫ್ಯೂವನ್ನು ಸ್ವಾಗತಿಸುತ್ತೇವೆ. ಕೊರೊನಾ ಕೇಸ್ ಹೆಚ್ಚಳವಾದ ಕಾರಣ ಈ ಕ್ರಮಗಳು ಅನಿವಾರ್ಯವಾಗಿವೆ. ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಾಳೆ ಹಿರಿಯ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕಡ್ಡಾಯ ಸೇವೆಗೆ ಆದೇಶದ ಕುರಿತೂ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕೆಲವು ವೈದ್ಯರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಪ್ರಮುಖರ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕುಂಭಮೇಳದ 3ನೇ ಶಾಹಿ ಸ್ನಾನದಲ್ಲಿ 13 ಲಕ್ಷ ಭಕ್ತರು ಭಾಗಿ, 5 ದಿನಗಳಲ್ಲಿ 2,167 ಮಂದಿಗೆ ಕೊವಿಡ್. ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಏಪ್ರಿಲ್ 10ರಿಂದ ಈವರೆಗೆ 2,167 ಮಂದಿಗೆ ಕೊವಿಡ್ ದೃಢಪಟ್ಟಿದೆ. ಈ ಪೈಕಿ 18 ಸ್ವಾಮೀಜಿಗಳಿಗೆ ಕೊರೊನಾ ಸೋಂಕು ತಗಲಿದೆ. ಮಂಗಳವಾರ 9 ಸಾಮೀಜಿಗಳಿಗೆ ಸೋಂಕು ತಗುಲಿದ್ದು, ಇದಕ್ಕಿಂತ ಮುಂಚೆ 9 ಸ್ವಾಮೀಜಿಗಳಿಗೆ ಸೋಂಕು ತಗಲಿರುವುದು ದೃಢಪಟ್ಟಿತ್ತು ಎಂದು ಹರಿದ್ವಾರದ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಡಾ.ಎಸ್.ಕೆ ಝಾ ಹೇಳಿದ್ದಾರೆ. ಏಪ್ರಿಲ್ 13 ಮತ್ತು ಏಪ್ರಿಲ್ 14ರಂದು ಕುಂಭ ಮೇಳದಲ್ಲಿ ಭಾಗವಹಿಸಿದ ಭಕ್ತರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿದರೆ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಅವರು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ ಎರಡು ಲಕ್ಷ ದಾಟಿದೆ. ಬುಧವಾರ ದೇಶದಲ್ಲಿ ಪತ್ತೆಯಾದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2,00,739 ಆಗಿದ್ದು, 1,038 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಸೋಂಕಿತರ ಸಂಖ್ಯೆ 1,40,74,564 (1.4 ಕೋಟಿಗೆ) ತಲುಪಿದ್ದು ಈವರೆಗೆ ಸಾವಿಗೀಡಾದವ ಸಂಖ್ಯೆ 1,73,123 ಆಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,71,877 ಆಗಿದ್ದು, 1,24,29,564 ಮಂದಿ ಚೇತರಿಸಿಕೊಂಡಿದ್ದಾರೆ. 11,44,93,238 ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
Read: ಕೊರೊನಾ ಹಾಟ್ ಸ್ಪಾಟ್ ಆಗ್ತಿದ್ಯಾ ಕುಂಭಮೇಳ ! 1700 ಜನಕ್ಕೆ ಪಾಸಿಟಿವ್ !
The Karnataka government has asked those returning from Kumbh Mela at Haridwar to get themselves quarantined and get tested for coronavirus infection.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 11:27 am
Mangalore Correspondent
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm