ಕೊರೊನಾ ; ಮಾಜಿ ಸಿಎಂ ಕುಮಾರಸ್ವಾಮಿಗೇ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ಇಲ್ಲ !!

17-04-21 01:30 pm       Headline Karnataka News Network   ಕರ್ನಾಟಕ

ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ.

ಬೆಂಗಳೂರು, ಎ.17: ಕೋವಿಡ್ ಸೋಂಕಿಗೆ ಒಳಗಾಗಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ. ಕೋವಿಡ್ ಪಾಸಿಟಿವ್ ಆದಬಳಿಕ ಅವರನ್ನು ವೈದ್ಯರು ಆಸ್ಪತ್ರಗೆ ಅಡ್ಮಿಟ್ ಆಗಲು ಸಲಹೆ ಮಾಡಿದ್ದಾರೆ.
ಈ ವೇಳೆ, ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಲು ಬಯಸಿದಾಗ ಅಲ್ಲಿ ಕುಮಾರಸ್ವಾಮಿಯವರಿಗೆ ಬೆಡ್ ಇಲ್ಲವೆಂದು ವೈದ್ಯರು ತಿಳಿಸಿದ್ದಾರೆ.

ಕುಮಾರಸ್ವಾಮಿಯಂತಹ ಪ್ರಭಾವಿಗಳಿಗೇ ಮಣಿಪಾಲ ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿಲ್ಲ ಎಂದ್ರೆ ಸಾಮಾನ್ಯ ಜನರ ಪಾಡೇನು ಎನ್ನುವ ಮಾತು ಕೇಳಿಬಂದಿದೆ. ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಕುಮಾರಸ್ವಾಮಿಯವರಿಗೆ ಶುಕ್ರವಾರ ಸಂಜೆ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿ ಇಂದು ಬೆಳಗ್ಗೆ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು, ಪಾಸಿಟಿವ್ ಕಂಡುಬಂದಿತ್ತು.

ರೋಗ ಲಕ್ಷಣಗಳಿಲ್ಲದ ಕಾರಣ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ವೈದ್ಯರು ಈ ವಿಷಯದಲ್ಲಿ ರಿಸ್ಕ್ ಬೇಡ, ಆಸ್ಪತ್ರೆಯಲ್ಲಿ ಅಡ್ಮಿಟ್ ಆಗುವಂತೆ ಸೂಚಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಆಪ್ತರು ಮಣಿಪಾಲ ಆಸ್ಪತ್ರೆಯಲ್ಲಿ ವಿಚಾರಿಸಿದಾಗ ಅಲ್ಲಿ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ಅರಿತ ಆರೋಗ್ಯ ಸಚಿವ ಸುಧಾಕರ್ ಮಣಿಪಾಲ್ ಆಸ್ಪತ್ರೆಯಲ್ಲಿ ವಿಚಾರಿಸಿದ್ದು, ಬೆಡ್ ಕೊಡಿಸಲು ಪ್ರಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ.

ಇದೇ ವೇಳೆ, ಕುಮಾರಸ್ವಾಮಿಗೆ ಬೇರೊಂದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಾಗಿದ್ದು, ಅಲ್ಲಿ ದಾಖಲಾಗಲು ಮುಂದಾಗಿದ್ದಾರೆ. ಆದರೆ ಬೆಡ್ ಸಿಕ್ಕರೂ ಆಸ್ಪತ್ರೆಯಲ್ಲಿ ದಾಖಲಾಗಲು ಕುಮಾರಸ್ವಾಮಿಗೆ ಸಾಧ್ಯವಾಗಿಲ್ಲ. ಪ್ರಕರಣ ಒಂದರಲ್ಲಿ ತುರ್ತಾಗಿ ಕುಮಾರಸ್ವಾಮಿ ಕೋರ್ಟಿಗೆ ಹಾಜರಾಗಬೇಕಿದ್ದರಿಂದ ಕಾವಿಡ್ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದಾರೆ. 

Read: ಎಚ್‌. ಡಿ. ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್