ಬ್ರೇಕಿಂಗ್ ನ್ಯೂಸ್
19-04-21 10:42 am Headline Karnataka News Network ಕರ್ನಾಟಕ
ಬೆಂಗಳೂರು, ಎ.19 : ಕನ್ನಡ ಸಾರಸ್ವತ ಲೋಕದ ಮತ್ತೊಂದು ಅಮೂಲ್ಯ ರತ್ನ ಮರೆಯಾಗಿದೆ. ಶಬ್ದ ಬ್ರಹ್ಮ, ನಿಘಂಟು ತಜ್ಞ ಎಂದೇ ಖ್ಯಾತಿ ಪಡೆದಿದ್ದ ಶತಾಯುಷಿ ಪ್ರೊ.ಜಿ ವೆಂಕಟಸುಬ್ಬಯ್ಯ (108) ಅವರು ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ವೆಂಕಟಸುಬ್ಬಯ್ಯ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ತಡರಾತ್ರಿ 1.30ಕ್ಕೆ ಅವರು ಇಹಲೋಕ ತ್ಯಜಿಸಿದ್ದಾರೆ. ಚಾಮರಾಜಪೇಟೆಯ ಚಿತಾಗಾರದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಅಂತ್ಯಕ್ರಿಯೆ ನಡೆಯಲಿದ್ದು, ಜಯನಗರ 7ನೇ ಬ್ಲಾಕ್‌ನ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪ್ರೊ.ಜಿ. ವೆಂಕಟಸುಬ್ಬಯ್ಯ 1913ರ ಆಗಸ್ಟ್ 13ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಜನಿಸಿದ್ದರು. ತಂದೆ ಗಂಜಾಮ್ ತಿಮ್ಮಯ್ಯ ಖ್ಯಾತ ಕನ್ನಡ ಮತ್ತು ಸಂಸ್ಕೃತ ಪಂಡಿತರಾಗಿದ್ದರು. ಇದರಿಂದಾಗಿ ಬಾಲಕನಾಗಿದ್ದಾಗಲೇ ವೆಂಕಟಸುಬ್ಬಯ್ಯನವರಿಗೆ ಸಾಹಿತ್ಯದಲ್ಲಿ ಒಲವು ಬೆಳೆದಿತ್ತು. ವೆಂಕಟಸುಬ್ಬಯ್ಯನವರು ಪೋಷಕರಿಗೆ 8 ಮಂದಿ ಮಕ್ಕಳಲ್ಲಿ ಒಬ್ಬರಾಗಿದ್ದರು.
ತಂದೆ ಸರ್ಕಾರಿ ಉದ್ಯೋಗದಲ್ಲಿದ್ದ ಕಾರಣ ಒಂದು ಕಡೆಯಿಂದ ಇನ್ನೊಂದು ಕಡೆಗೆ ವರ್ಗಾವಣೆಯಾಗುತ್ತಿದ್ದರು. ಹೀಗಾಗಿ ವೆಂಕಟಸುಬ್ಬಯ್ಯನವರು ಪ್ರಾಥಮಿಕ ಶಿಕ್ಷಣವನ್ನು ಬನ್ನೂರು ಮತ್ತು ಮಧುಗಿರಿಯಲ್ಲಿ ಪೂರೈಸಿದರು.
1930ರಲ್ಲಿ ವೆಂಕಟಸುಬ್ಬಯ್ಯ ಅವರ ಕುಟುಂಬವು ಮೈಸೂರು ನಗರಕ್ಕೆ ಸ್ಥಳಾಂತರಗೊಂಡಿತು. ಇಲ್ಲಿ ವೆಂಕಟಸುಬ್ಬಯ್ಯ ಮೈಸೂರಿನ ಯುವರಾಜ ಕಾಲೇಜಿಗೆ ಸೇರಿದ್ದಲ್ಲದೆ, ಕೆ.ವಿ.ಪುಟ್ಟಪ್ಪ (ಕುವೆಂಪು) ಅವರ ಪ್ರಭಾವಕ್ಕೆ ಒಳಗಾದರು. ನಂತರ ವೆಂಕಟಸುಬ್ಬಯ್ಯ ಅವರು ತಮ್ಮ ಕಲಾ ಪದವಿ ಪಡೆಯಲು ಮೈಸೂರಿನ ಮಹಾರಾಜ ಕಾಲೇಜಿಗೆ ಸೇರಿದರು. ಅಲ್ಲಿ ಅವರು ಆಯ್ಕೆ ಮಾಡಿಕೊಂಡಿದ್ದ ವಿಷಯ ಪ್ರಾಚೀನ ಇತಿಹಾಸ, ಸಂಸ್ಕೃತ ಮತ್ತು ಹಳೆಯ ಕನ್ನಡವಾಗಿತ್ತು.
ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬಂಗಾರದ ಪದಕದೊಂದಿಗೆ ಎಂಎ ಪದವಿ ಪೂರ್ಣಗೊಳಿಸಿದ್ದರು. ಮಹಾರಾಜ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಬಳಿಕ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಪ್ರೊ.ಜಿ ವೆಂಕಟಸುಬ್ಬಯ್ಯ ಅವರು ಸುಮಾರು 70 ಪುಸ್ತಕಗಳನ್ನು, 14 ನಿಘಂಟುಗಳನ್ನು ಪ್ರಕಟಗೊಳಿಸಿದ್ದಾರೆ. ಪ್ರೊ ಜಿ ವಿಯವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಗೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಗಳಿಸಿದ್ದರು.
ನಿಘಂಟು ಪರಿವಾರ, ಅಕ್ರೂರ ಚರಿತ್ರೆ, ಇಗೊ ಕನ್ನಡ, ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
Professor G. Venkatasubbaiah, the grand old man of the Kannada language, died in Bengaluru early on Monday. He was 107. GV, as he is popularly known in Kannada literary field, was a lexicographer, grammarian and literary critic. He has compiled 12 dictionaries.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm