ಕೋವಿಡ್ ಸೋಂಕಿನಿಂದ ಗುಣಮುಖ ; ಸಿಎಂ ಬಿಎಸ್ವೈ ಆಸ್ಪತ್ರೆಯಿಂದ ಬಿಡುಗಡೆ

22-04-21 02:05 pm       Headline Karnataka News Network   ಕರ್ನಾಟಕ

ಕೋವಿಡ್ ಸೋಂಕು ಪೀಡಿತರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು, ಎ.22: ಕೋವಿಡ್ ಸೋಂಕು ಪೀಡಿತರಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರ ಕೋವಿಡ್ ನೆಗೆಟಿವ್ ರಿಪೋರ್ಟ್ ಬಂದಿದೆ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.

ಮಣಿಪಾಲ್ ಆಸ್ಪತ್ರೆಯ ವೈದ್ಯರು ಹೂಗುಚ್ಛ ಕೊಟ್ಟು ಮುಖ್ಯಮಂತ್ರಿ ಅವರನ್ನು ಕಳಿಸಿಕೊಟ್ಟಿದ್ದಾರೆ. ಹೊರಗೆ ಬಂದು ಕಾರಿನಲ್ಲಿ ತೆರಳುತ್ತಿದ್ದಾಗ ಮಾಧ್ಯಮಕ್ಕೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಜನರಲ್ಲಿ ಮನವಿ ಮಾಡುತ್ತಿದ್ದೇನೆ. ದಯವಿಟ್ಟು ಮನೆಯಿಂದ ವಿನಾಕಾರಣ ಹೊರಗೆ ಬರಬೇಡಿ. ಆದಷ್ಟು ಒಳಗೇ ಇರಿ. ಹೊರಗೆ ಹೋಗುವಾಗ ಕಡ್ಡಾಯ ಮಾಸ್ಕ್ ಧರಿಸಿ, ಅಂತರವನ್ನು ಕಾಪಾಡಿ. ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಿ ಎಂದು ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಮತ್ತು ಇನ್ನೆರಡು ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತೀವ್ರ ಬಳಲಿದ್ದ ಮುಖ್ಯಮಂತ್ರಿ ಕಳೆದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ನಡೆಸಿದಾಗ, ಕೋವಿಡ್ ಸೋಂಕು ಕಂಡುಬಂದಿತ್ತು. ಒಂದು ವಾರದಲ್ಲಿ ಗುಣಮುಖರಾಗಿ ಹೊರಬಂದಿದ್ದಾರೆ. ಕಳೆದ ಬಾರಿ ಲಾಕ್ಡೌನ್ ಸಂದರ್ಭದಲ್ಲಿಯೂ ಮುಖ್ಯಮಂತ್ರಿ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಈ ಬಾರಿ ಎರಡನೇ ಬಾರಿಗೆ ಸೋಂಕಿಗೆ ತುತ್ತಾಗಿದ್ದರು.

Karnataka Chief Minister B S Yediyurappa was discharged from Bengaluru's Manipal Hospital after he recovered from Covid-19.