ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ಗೆ ಕೊರೋನಾ ಪಾಸಿಟಿವ್

25-08-20 02:03 pm       Bangalore Correspondent   ಕರ್ನಾಟಕ

ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಂಗಳೂರು (ಆ. 25): ಕೊರೋನಾ ಸೋಂಕು ರಾಜಕಾರಣಿಗಳನ್ನೂ ಬಿಟ್ಟಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಪುಟದ ಅನೇಕ ಸಚಿವರು ಸೇರಿದಂತೆ ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೂ ಕೊರೋನಾ ಸೋಂಕು ದೃಢಪಟ್ಟಿದೆ.

ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳಿಂದ ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದಾರೆ.