ಬ್ರೇಕಿಂಗ್ ನ್ಯೂಸ್
23-04-21 10:40 pm Headline Karnataka News Network ಕರ್ನಾಟಕ
ಸುಬ್ರಹ್ಮಣ್ಯ, ಏ.23 : ರಾಜ್ಯದ ನಂಬರ್ ವನ್ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೆ ಅಕ್ರಮದ ಗಂಭೀರ ಆರೋಪ ಕೇಳಿಬಂದಿದೆ.
ಕುಕ್ಕೆ ಸುಬ್ರಹ್ಮಣ್ಯದ ಆದಾಯದ ಲೆಕ್ಕ ಪರಿಶೋಧನೆಯೇ ನಡೆದಿಲ್ಲ. ಕಣ್ಣಳತೆಗೇ ಆದಾಯ ತೋರಿಸಿ ದೇವಸ್ಥಾನದ ಆಡಳಿತ ಮಂಡಳಿ ಲೆಕ್ಕ ಕೊಡುತ್ತಿದೆ. ಕಳೆದ 5 ವರ್ಷದಿಂದ ದೇವಳದ ಲೆಕ್ಕ ಪರಿಶೋಧನೆ ನಡೆದೇ ಇಲ್ಲ. ವಾರ್ಷಿಕ ಆದಾಯದಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎಂದು ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ವಕೀಲರೊಬ್ಬರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ದೂರು ನೀಡಿರುವ ಬೆಂಗಳೂರು ಮೂಲದ ವಕೀಲ ಶ್ರೀಹರಿ ಕುತ್ಸ ಎಂಬವರು ದೇವಸ್ಥಾನದ ವಿರುದ್ಧದ ದೂರಿನಲ್ಲಿ ಪ್ರಮುಖ ಅಂಶಗಳ ಉಲ್ಲೇಖ ಮಾಡಿದ್ದಾರೆ.
ಐದು ವರ್ಷಗಳಲ್ಲಿ 100 ಕೋಟಿಗೂ ಹೆಚ್ಚು ಹಣ ಸಂಗ್ರಹ
ಪ್ರತಿವರ್ಷ ಅಂದಾಜಿನ ಮಾಹಿತಿಯನ್ನೇ ಕ್ಷೇತ್ರದ ಆಡಳಿತ ಮಂಡಳಿ ನೀಡುತ್ತಿದೆ. 5 ವರ್ಷಗಳಲ್ಲಿ 100 ಕೋಟಿಗೂ ಹೆಚ್ಚು ಹಣ ಸಂಗ್ರಹವಾದರೂ ಲೆಕ್ಕ ಪರಿಶೋಧನೆ ಆಗದಿರೋದು ಭಾರೀ ಅನುಮಾನಕ್ಕೆ ಎಡಮಾಡಿಕೊಟ್ಟಿದೆ. ಕ್ಷೇತ್ರದ ಆಡಳಿತ ಮಂಡಳಿ 60 ಕೋಟಿಗೂ ಅಧಿಕ ರೂಪಾಯಿ ಪೋಲು ಮಾಡಿರುವ ಅನುಮಾನವಿದೆ.
ಕ್ಷೇತ್ರದ ಆಡಳಿತ ಮಂಡಳಿ ಧಾರ್ಮಿಕೇತರ ಚಟುವಟಿಕೆಗಳಿಗೆ ಹಣ ಪೋಲು ಮಾಡಿದೆ. ದೇಗುಲಕ್ಕೆ ಸಂಬಂಧಪಡದ ವ್ಯಕ್ತಿಗಳು ದೇವಸ್ಥಾನದ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ಕ್ಷೇತ್ರಕ್ಕೆ ಹರಕೆ ರೂಪದಲ್ಲಿ ಬಂದ ಚಿನ್ನ, ಬೆಳ್ಳಿ ಆಭರಣಗಳ ಬಗ್ಗೆ ಸಮರ್ಪಕವಾದ ಮಾಹಿತಿಯೇ ದೇವಸ್ಥಾನದ ಬಳಿ ಇಲ್ಲ.
ರಿಜೆಕ್ಟ್ ಆಗಿರುವ ಚಿನ್ನಾಭರಣದ ಲೆಕ್ಕ ತೋರಿಸಿಲ್ಲ. ದೇವಳಕ್ಕೆ ಬಂದ ಚಿನ್ನಾಭರಣವನ್ನು ಕರಗಿಸಲಾಗುತ್ತದೆ. ಕರಗಿಸಿದ ವೇಳೆ ಬಂದ ಒಳ್ಳೆಯ ಚಿನ್ನದ ಲೆಕ್ಕ ಮಾತ್ರ ಕೊಡಲಾಗಿದೆ. ಕರಗಿಸಿದ ವೇಳೆ ರಿಜೆಕ್ಟ್ ಆದ ಚಿನ್ನಾಭರಣದ ಲೆಕ್ಕವನ್ನು ತೋರಿಸಿಲ್ಲ. ಈ ಲೆಕ್ಕವೇ ಲಕ್ಷಾಂತರ ರೂಪಾಯಿ ರೂಪದಲ್ಲಿ ಇರಬೇಕಿದೆ. ಇನ್ನು ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿ ಬಾಡಿಗೆ, ಕಟ್ಟಡ ನಿರ್ವಹಣೆ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಪ್ರತಿವರ್ಷ ಹರಾಜು ಪ್ರಕ್ರಿಯೆ ಮಾಡಬೇಕು.
ಆದರೆ ಸುಬ್ರಹ್ಮಣ್ಯದಲ್ಲಿ ಈ ಪ್ರಕ್ರಿಯೆ ಯಾವುದೂ ನಡೆಯುತ್ತಿಲ್ಲ. ಹಲವಾರು ವರ್ಷಗಳಿಂದ ಇದ್ದವರೇ ಈ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದಾರೆ. ಸಮರ್ಪಕವಾಗಿ ಬಾಡಿಗೆಯನ್ನೂ ಯಾರೂ ನೀಡುತ್ತಿಲ್ಲ ಅಂತಾ ವಕೀಲ ಶ್ರೀಹರಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಕ್ಷೇತ್ರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು, ಸರ್ಕಾರ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಕೊಟ್ಟ ದೂರಿನಲ್ಲಿ ಶ್ರೀಹರಿ ಕುತ್ಸ ಉಲ್ಲೇಖ ಮಾಡಿದ್ದಾರೆ.
ವಕೀಲ ಶ್ರೀಹರಿ ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ದೂರು ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ಬಂದಿದೆ. ಪರಿಶೀಲನೆ ಮಾಡುವಂತೆ ಈ ಹಿಂದೆಯೇ ಸೂಚಿಸಿದ್ದೇನೆ. ಲೆಕ್ಕ ಪರಿಶೋಧನೆ ಮಾಡಲು ಈ ಹಿಂದೆಯೇ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದ್ದೆ. ಲೆಕ್ಕ ಪರಿಶೋಧನೆ ಆದರೆ ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗುತ್ತದೆ ಅಂತ ಪ್ರತಿಕ್ರಿಯೆ ನೀಡಿದ್ದಾರೆ.
A complaint has been filed to Karnataka CM against Kukke Shri Subrahmanya Temple trust for misuse of temple funds.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm