ವೀಕೆಂಡ್ ಲಾಕ್ ಡೌನ್; ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿದ 170 ವಾಹನಗಳು ಜಪ್ತಿ

24-04-21 08:00 pm       Headline Karnataka News Network   ಕರ್ನಾಟಕ

ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ.

ಬೆಂಗಳೂರು ಏಪ್ರಿಲ್ 24: ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 150 ವಾಹನಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಜಪ್ತಿ ಮಾಡಿದ್ದಾರೆ. ಡಿಸಿಪಿ ಸಂಜೀವ ಎಂ. ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅನಾವಶ್ಯಕವಾಗಿ ಓಡಾಟ ನಡೆಸಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದವರ ವಾಹನ ಜಪ್ತಿ ಮಾಡಿ ಶಾಕ್ ನೀಡಿದ್ದಾರೆ

Bengaluru lockdown news: Today's updates from your city | Bengaluru News -  Times of India

ಲಾಕ್ ಡೌನ್ ಮತ್ತು ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅನಾವಶ್ಯಕವಾಗಿ ಓಡಾಡುವವರ ವಾಹನಗಳನ್ನು ಜಪ್ತಿ ಮಾಡುತ್ತೇವೆ. ಮೊದಲ ಹಂತದಲ್ಲಿ ಈಗಾಗಲೇ 150 ವಾಹನಗಳನ್ನು ಜಪ್ತಿ ಮಾಡಿದ್ದೇವೆ. ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳ ಮೇಲೂ ನಿಗಾ ವಹಿಸಲಾಗಿದೆ. ಆಸ್ಪತ್ರೆ ಸಿಬ್ಬಂದಿ ಕೂಡ ಸ್ಪಂದಿಸುತ್ತಿದ್ದಾರೆ. ಬಿಡ್ ಸಿಗದೇ ರೋಗಿಗಳು ಕಂಗಾಲಾಗುವ ಅಗತ್ಯವಿಲ್ಲ. ಬೆಡ್ ಒದಗಿಸುವ ಸಂಬಂಧ ಎಲ್ಲಾ ಡಿಸಿಪಿಗಳಿಗೆ ಜವಾಬ್ಧಾರಿ ವಹಿಸಲಾಗಿದೆ. ಬೆಡ್ ಇದ್ದೂ ರೋಗಿಗಳಿಗೆ ನೀಡದೆ ನಿರಾಕರಿಸಿದರೆ ಅಂಥ ಆಸ್ಪತ್ರೆ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸುವುದಾಗಿ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಎಂ. ಪಾಟೀಲ್ ತಿಳಿಸಿದ್ದಾರೆ.

Demand for activating dummy traffic signal at Kimko Junction

ಕೆ.ಆರ್. ಮಾರ್ಕೆಟ್ ಸ್ಥಗಿತ: ಪಶ್ಚಿಮ ವಿಭಾಗದ ಪೊಲೀಸರ ವ್ಯಾಪ್ತಿಗೆ ಬರುವ ಕೆ.ಆರ್. ಮಾರ್ಕೆಟ್ ನಲ್ಲಿ ಜನ ಸಂದಣಿ ಇತ್ತು. ಮಾರ್ಕೆಟ್ ಬಂದ್ ಮಾಡಲಿಕ್ಕೆ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಇದರ ಜತೆಗೆ ಕಾರ್ಯ ನಿರ್ವಹಿಸುತ್ತಿದ್ದ ಬಾಳೆಹಣ್ಣು ಮಂಡಿಗಳನ್ನು ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಬಂದ್ ಮಾಡಿದ್ದಾರೆ. ಚಿಕ್ಕಪೇಟೆಯಲ್ಲಿ ಕೂಡ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

170 vehicles seized in Bangalore for violating covid guidelines on weekend curfew said DCP Traffic.