ಬ್ರೇಕಿಂಗ್ ನ್ಯೂಸ್
25-08-20 09:55 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೋಲು ಮಂಡೆ ಜಂಗಮ ದೇವ ಜಾನಪದ ಹಾಡು ತಿರುಚಲಾಗಿದೆ ಹಾಗೂ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಕನ್ನಡ ರ‍್ಯಾಪರ್ ಹಾಗೂ ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿ, ಅಶ್ಲೀಲತೆ ಇರುವ ತುಣುಕನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟಿರುವ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನುವ ಕಾರಣಕ್ಕೆ ರ‍್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಅಶ್ಲೀಲತೆ ಇರುವ ತುಣುಕನ್ನು ತೆಗೆದು ಮರು ಚಿತ್ರೀಕರಣ ಮಾಡುವುದಾಗಿ ತಿಳಿಸಿದ್ದಾರೆ.
ಗಣೇಶ ಹಬ್ಬದ ಹಿನ್ನೆಲೆ ‘ಕೋಲು ಮಂಡೆ ಜಂಗಮ ದೇವ’ ಎಂಬ ಹೊಸ ರ‍್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ, ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿತ್ತು.
ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆ.23ರಂದು ಈ ವಿಡಿಯೋ ಬಿಡುಗಡೆಯಾಗಿತ್ತು. ಈಗಾಗಲೇ 36 ಲಕ್ಷಕ್ಕೂ ಅಧಿಕ ಮಂದಿ ಈ ಹಾಡನ್ನು ವೀಕ್ಷಿಸಿದ್ದಾರೆ. ಅಲ್ಲದೇ ಯೂಟ್ಯೂಬ್‍ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm