ದ್ವಿತೀಯ PU ಪ್ರಾಯೋಗಿಕ ಪರೀಕ್ಷೆ‌ ದಿಢೀರ್​ ಮುಂದೂಡಿಕೆ ; ಸಚಿವ ಎಸ್. ಸುರೇಶ್ ಕುಮಾರ್

25-04-21 06:01 pm       Headline Karnataka News Network   ಕರ್ನಾಟಕ

ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಬೆಂಗಳೂರು: ಏಪ್ರಿಲ್ 28 ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್19 ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ‌ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ವಾರ್ಷಿಕ ಪರೀಕ್ಷೆಗಳು ಮುಗಿದ ಕೂಡಲೇ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

Karnataka second year pre-university exam dates announced | The News Minute

ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ‌ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವರು ಕಿವಿಮಾತು‌ ಹೇಳಿದ್ದಾರೆ.

The Department of Pre-University Education, Karnataka will conduct the practical exams for the Pre-University Course (PUC)-II as per the schedule. The PUC II practical exam dates and guidelines for conducting the practical examination have been released.