ಬ್ರೇಕಿಂಗ್ ನ್ಯೂಸ್
28-04-21 11:04 am Headline Karnataka News Network ಕರ್ನಾಟಕ
ನವದೆಹಲಿ,ಎ.28: ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಕರ್ನಾಟಕದ ಮಾಜಿ ಸಚಿವ ರೋಷನ್ ಬೇಗ್ ವಿರುದ್ಧ ಮಂಗಳವಾರ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಐಎಂಎ ನಿಧಿಯಿಂದ ಅಕ್ರಮವಾಗಿ ಪಡೆದ ಹಣವನ್ನು ವಿಧಾನಸಭೆ ಚುನಾವಣೆಗೆ ಬಳಸಿದ್ದಾಗಿ ದೂರಿದೆ.
ಐಎಂಎ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಹಾಗೂ ಅವರ ಸಂಸ್ಥೆ, ಬೇಗ್ ಒಡೆತನದ ದಾನೀಶ್ ಪಬ್ಲಿಕೇಶನ್ಸ್ ಸಂಸ್ಥೆಗಳ ಹೆಸರನ್ನೂ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ರೋಷನ್ ಬೇಗ್ ಅವರು ವಿಧಾನಸಭೆ ಚುನಾವಣೆಯ ವೆಚ್ಚಕ್ಕಾಗಿ ಐಎಂಎ ನಿಧಿಯಿಂದ ಹಲವು ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ. ಅವರು ತಮ್ಮ ಸಂಸ್ಥೆಯ ನೌಕರರ ವೇತನ ಸೇರಿದಂತೆ ದಿನನಿತ್ಯದ ಖರ್ಚಿಗೆ ಈ ಹಣವನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.
ಆರೋಪಿಯು ಜನಪ್ರಿಯತೆ ಹೆಚ್ಚಿಸಿಕೊಳ್ಳಲು ತನ್ನ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದೇ ಹಣವನ್ನು ವ್ಯಯಿಸಿದ್ದಾಗಿ ಆರೋಪಿಸಲಾಗಿದೆ ಎಂದು ಸಿಬಿಐ ವಕ್ತಾರ ಆರ್.ಸಿ. ಜೋಶಿ ತಿಳಿಸಿದ್ದಾರೆ.
ತನ್ನ ಅಕ್ರಮ ಚಟುವಟಿಕೆಗಳನ್ನು ಸುಲಭವಾಗಿ ಮುಂದುವರೆಸುವ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದ ಅಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಬೇಗ್ ಅವರಿಗೆ ಐಎಂಎ ಗ್ರೂಪ್ ಈ ಹಣವನ್ನು ನೀಡಿತ್ತು ಎಂದು ಸಿಬಿಐ ದೂರಿದೆ.
ಹೂಡಿಕೆಗೆ ಉತ್ತಮ ಲಾಭ ನೀಡುವುದಾಗಿ ಆಮಿಷ ಒಡ್ಡಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಹೂಡಿಕೆದಾರರಿಂದ ₹4,000 ಕೋಟಿಯಷ್ಟು ಹಣವನ್ನು ಐಎಂಎ ಗ್ರೂಪ್ ಸಂಗ್ರಹಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾದ 4 ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಸಿಬಿಐ, ಈ ಹಿಂದೆಯೇ ಮನ್ಸೂರ್ ಖಾನ್, ಅವರ ಕಂಪನಿಯ ನಿರ್ದೇಶಕರು, ಕಂದಾಯ ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 33 ಆರೋಪಿಗಳ ವಿರುದ್ಧ 3 ದೋಷಾರೋಪ ಪಟ್ಟಿ ಹಾಗೂ 3 ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದೆ.
The Central Bureau of Investigation (CBI) on Tuesday filed a supplementary charge sheet against former Congress Minister Roshan Baig in connection with the I Monetary Advisory (IMA) investment scam.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm