ಬ್ರೇಕಿಂಗ್ ನ್ಯೂಸ್
03-05-21 01:48 pm Headline Karnataka News Network ಕರ್ನಾಟಕ
Photo credits : deccanherald
ಚಾಮರಾಜನಗರ ಮೇ 3: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತದಲ್ಲಿ ನಡೆದ ಸಾವು-ನೋವಿಗೆ ಮೈಸೂರು ಜಿಲ್ಲಾಧಿಕಾರಿ ಹಾಗೂ ಜನರು ಕಾರಣ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಆರೋಪಿಸಿದ್ದಾರೆ.
ಘಟನೆಯ ಕುರಿತಾಗಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳು ಆಕ್ಸಿಜನ್‌ಗಾಗಿ ಮೈಸೂರನ್ನು ಅವಲಂಬಿಸಿದೆ. ಆದರೆ ಮೈಸೂರಿನಿಂದ ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದಿರುವುದರಿಂದ ಈ ಘಟನೆ ಸಂಭವಿಸಿದೆ ಎಂದರು.

ಮೈಸೂರಿನಲ್ಲಿ ನಾಲ್ಕು ಆಕ್ಸಿಜನ್ ಪ್ಲಾಂಟ್ ಕೆಲಸ ಮಾಡುತ್ತಿಲ್ಲ. ಅದನ್ನು ಚಾಮರಾಜನಗರಕ್ಕೆ ಕೊಡಿ, ನಾವು ನಡೆಸಿಕೊಂಡು ಹೋಗುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಜನರು ಕೊನೆ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ
ಕೋವಿಡ್ ಸೋಂಕಿತರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರಬೇಡಿ. ಈ ಬಗ್ಗೆ ಪರಿಪರಿಯಾಗಿ ಕೇಳಿಕೊಳ್ಳುತ್ತಿದ್ದೇವೆ. ಆದರೆ, ಜನರು ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಈ ಬಗ್ಗೆ ಡೆತ್ ರಿಪೋರ್ಟ್‌ನಲ್ಲಿ ಮಾಹಿತಿ ಪಡೆದುಕೊಳ್ಳುತ್ತೇನೆ. ಕೊನೆಯ ಗಳಿಗೆಯಲ್ಲಿ ಆಸ್ಪತ್ರೆಗೆ ಬರುವುದರ ಬದಲು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗಲೇ ಆಸ್ಪತ್ರೆಗೆ ದಾಖಲಾಗಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ನಡೆದ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಎಲ್ಲಾ ಸಾವುಗಳು ಆಕ್ಸಿಜನ್ ಕೊರತೆಯಿಂದ ನಡೆದಿದೆಯಾ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ರಾತ್ರಿ 12.30 ರಿಂದ 2.30 ಗಂಟೆಯವರೆಗೆ ಮಾತ್ರ ಆಕ್ಸಿಜನ್ ಕೊರತೆ ಆಗಿದೆ. 24 ಸಾವುಗಳು ಆಮ್ಲಜನಕದ ಕೊರತೆಯಿಂದ ಆಗಿದೆ ಎಂಬುವುದು ಸರಿಯಲ್ಲ. ಈ ನಿಟ್ಟಿನಲ್ಲಿ 24 ಸಾವುಗಳು ಯಾವ ಕಾರಣದಿಂದ ಆಯಿತು ಎಂಬ ಮಾಹಿತಿಯನ್ನು ಕೋರಿದ್ದೇನೆ ಎಂದು ಹೇಳಿದರು.

ಡೆತ್ ಆಡಿಟ್ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಈಗಾಗಲೇ ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಹಾಗೂ ಎಡಿಜಿಪಿ ಪ್ರತಾಪ್ ರೆಡ್ಡಿ ಗಮನಕ್ಕೂ ತಂದಿದ್ದೇನೆ ಎಂದರು.
Read: ಚಾಮರಾಜನಗರ ಆಸ್ಪತ್ರೆಯಲ್ಲಿ ಮಾರಣಹೋಮ ; ಆಮ್ಲಜನಕ ಕೊರತೆಯಿಂದ 24 ಮಂದಿ ಸಾವು
Mysore DC Rohini Sinduri sole responsible for the death of 24 covid patients in Chamarajanagar hospital alleges Minister Suresh Kumar.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm