ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್‌ಗಳು ಖಾಲಿ ಆದ ಕಾರಣ ನಾಲ್ವರು ಬೆಡ್‌ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.
ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್‌ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.
ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್‌ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್‌ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.
ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್‌ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.
ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್‌ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm