ಬ್ರೇಕಿಂಗ್ ನ್ಯೂಸ್
04-05-21 10:10 pm Mangaluru Correspondent ಕರ್ನಾಟಕ
ಬೆಂಗಳೂರು, ಮೇ 04: ಕೊರೊನಾ ರೋಗಿಗಳ ಹೆಸರಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದಾರೆ.
ಒಬ್ಬ ವ್ಯಕ್ತಿಯ ಹೆಸರಲ್ಲಿ ಬರೋಬ್ಬರಿ 12 ಆಸ್ಪತ್ರೆಯಲ್ಲಿ 12 ಬೆಡ್ ಬುಕ್ ಆಗಿರುವುದು ಕಂಡುಬಂದಿದೆ. ಇವರು ಮಾಡ್ತಿರೋದು ಕೇವಲ ಭ್ರಷ್ಟಾಚಾರ ಅಲ್ಲ. ಮರ್ಡರ್. ಇವರದ್ದು ಮಧ್ಯರಾತ್ರಿಯ ದಂಧೆ. ರಾತ್ರಿ 12 ಗಂಟೆಗೆ ಇವರ ದಂಧೆ ಶುರುವಾಗುತ್ತದೆ. ಇವರೆಲ್ಲ ಹುಳ ಬಿದ್ದು ಸಾಯುತ್ತಾರೆ. ಇದರಲ್ಲಿ ಬಿಬಿಎಂಪಿ ಅಧಿಕಾರಿಯಿಂದ ತೊಡಗಿ ಎಲ್ಲರೂ ಸಾಥ್ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಬಿಎಂಪಿ ಬೆಡ್ ಗಳು, ಕೊರೊನಾ ವಾರಿಯರ್, ಎಂಪಿ, ಎಂಎಲ್ ಎ ಹೆಸರಲ್ಲಿ ಅಕ್ರಮವಾಗಿ ಬೆಡ್ ಬುಕ್ ಆಗುತ್ತಿರುವುದನ್ನು ಪತ್ತೆ ಮಾಡಿದ್ದು ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆರೋಗ್ಯ ಮಿತ್ರ ಸಿಬ್ಬಂದಿ ಬಿಬಿಎಂಪಿ ಹೆಲ್ಪ್ ಲೈನ್ ಹಾಗೂ ಬೆಡ್ ಹಂಚಿಕೆಗೆ ನಿಯುಕ್ತರಾಗಿರುವ ಸಿಬ್ಬಂದಿಗಳು ಸೇರಿ ಕೃತಕ ಬೆಡ್ ಅಭಾವ ಸೃಷ್ಟಿಸಿ ಜನರ ಜೀವಗಳ ಜೊತೆ ಚೆಲ್ಲಾಟ ಆಡುತ್ತಿರುವುದು ಕಂಡುಬಂದಿದೆ. ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈವರೆಗೂ ಪ್ರಭಾವಿಗಳ ಹೆಸರಲ್ಲಿ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದನ್ನು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಮನೆಯಲ್ಲಿಯೇ ಐಸೊಲೇಷನ್ ಇರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವ ಮಂದಿಯ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡಲಾಗುತ್ತಿದೆ. ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿರದ ಸೋಂಕಿತರ ಹೆಸರಿನಲ್ಲಿ ಬಿಬಿಎಂಪಿ ಉಸ್ತುವಾರಿ ಹೊಂದಿರುವ ಸಿಬ್ಬಂದಿ ಬೆಡ್ ನೋಂದಣಿಗೊಳಿಸಿ, ಕೆಲವೇ ಕ್ಷಣಗಳ ನಂತರ ಅದೇ ಬೆಡ್ ಅನ್ನು ಹಣಕ್ಕೆ ಮತ್ತೊಬ್ಬರ ಹೆಸರಿನಲ್ಲಿ ನೋಂದಣಿಗೊಳಿಸುತ್ತಾರೆ.
ನಿಜವಾಗಿಯೂ ಅವಶ್ಯಕತೆ ಇರುವ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಬೆಡ್ ಸಲುವಾಗಿ ಅಲೆದಾಡುತ್ತಿದ್ದರೆ, ಕೆಲವರು ಬೆಡ್ ಗಳನ್ನು ದುಡ್ಡಿಗೆ ಹಂಚಿಕೆ ಮಾಡುತ್ತಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಬೆಡ್ ಗಳ ಕೃತಕ ಅಭಾವ ಸೃಷ್ಟಿಯನ್ನು ವಿವರಿಸಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಜೊತೆಗೆ ಶಾಸಕರಾದ ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿ , ಉದಯ ಗರುಡಾಚಾರ್ ಪೊಲೀಸರ ಜೊತೆ ಸ್ಥಳಕ್ಕೇ ತೆರಳಿ, ಕಾರ್ಯಾಚರಣೆ ನಡೆಸಿದ್ದಾರೆ.
ಸಂಸದರ ಕಾರ್ಯಾಚರಣೆ ಬೆನ್ನಲ್ಲೇ ಪೊಲೀಸರು ಬೆಡ್ ಬ್ಲಾಕಿಂಗ್ ನಡೆಸುತ್ತಿದ್ದ ಇಬ್ಬರು ಏಜಂಟರನ್ನು ಬಂಧಿಸಿದ್ದಾರೆ. ರೋಹಿತ್ ಮತ್ತು ನೇತ್ರಾ ಎಂಬಿಬ್ಬರು ಏಜಂಟರು ಬಂಧಿತರಾಗಿದ್ದು ದಂಧೆಯಲ್ಲಿ ಇನ್ನೂ ಹಲವರು ಇರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಬೆಡ್ ಬ್ಲಾಕಿಂಗ್ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore South MP Tejasvi Surya on May 4 alleged widespread corruption in allocating COVID-19 beds, in an embarrassment for his own party which is in power in the state led by Chief Minister BS Yediyurappa. This at a time when critical COVID-19 patients are dying in want of oxygen, ICU and ventilator beds.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm