ಬ್ರೇಕಿಂಗ್ ನ್ಯೂಸ್
05-05-21 01:23 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 5: ಆಕ್ಸಿಜನ್ ಸಿಗದೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವಿಗೀಡಾದ ಪ್ರಕರಣದ ತನಿಖೆಯನ್ನು ನ್ಯಾಯಾಂಗ ತನಿಖೆ ಒಪ್ಪಿಸುವುದಾಗಿ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ. ಈ ಹಿನ್ನೆಲೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲಾಧಿಕಾರಿ ಕಚೇರಿಗಳ ದಾಖಲೆಗಳನ್ನು ಜಪ್ತಿ ಮಾಡುವಂತೆ ಹೈಕೋರ್ಟ್ ಆದೇಶಿಸಿದೆ.
ಕೋವಿಡ್ ನಿಯಂತ್ರಣ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಚಾಮರಾಜನಗರದಲ್ಲಿ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ವಿಚಾರವಾಗಿ ನಿನ್ನೆ ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿತ್ತು. ಈ ಸಂಬಂಧ ರಾಜ್ಯ ಸರ್ಕಾರದ ನಿಲುವು ಕೇಳಿತ್ತು.
ಈ ಬಗ್ಗೆ ಇಂದು ಹೈಕೋರ್ಟ್ಗೆ ಮಾಹಿತಿ ನೀಡಿದ ಅಡ್ವೊಕೇಟ್ ಜನರಲ್, ಪ್ರಕರಣದ ತನಿಖೆಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅವರ ಏಕಸದಸ್ಯ ಆಯೋಗ ರಚಿಸಲಾಗಿದೆ ಎಂದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ನಾವು ನ್ಯಾಯಾಂಗ ತನಿಖೆ ನಡೆಸುವ ಕುರಿತು ಸರ್ಕಾರದ ನಿಲುವನ್ನು ಮಾತ್ರವೇ ಕೇಳಿದ್ದೆವು, ಆದೇಶ ಹೊರಡಿಸಲು ಹೇಳಿರಲಿಲ್ಲ. ನಿವೃತ್ತ ನ್ಯಾಯಮೂರ್ತಿ ನೇಮಕವನ್ನು ಹೈಕೋರ್ಟ್ಗೆ ಬಿಡಬೇಕು ಎಂದಿತು. ಅಲ್ಲದೆ, ಒಂದು ವೇಳೆ ಸರ್ಕಾರ ಆದೇಶ ಹೊರಡಿಸಿದ್ದರೆ ಕೂಡಲೇ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಗಳಲ್ಲಿರುವ ಹಾಗೂ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿರುವ ಆಕ್ಸಿಜನ್ ಪೂರೈಕೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಜಪ್ತಿ ಮಾಡಬೇಕು ಎಂದು ಕೋರ್ಟ್ ಆದೇಶಿಸಿದೆ. ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಈ ದಾಖಲೆಗಳನ್ನು ಪರಿಶೀಲಿಸಬಹುದು ಎಂದು ಸ್ಪಷ್ಟಪಡಿಸಿದೆ.
ನ್ಯಾಯಾಂಗ ತನಿಖೆಗೆ ಸರ್ಕಾರವೇ ನಿವೃತ್ತ ನ್ಯಾಯಮೂರ್ತಿ ನೇಮಕ ಮಾಡಿ ಆದೇಶ ಹೊರಡಿಸಿರುವ ಕುರಿತು ಹೈಕೋರ್ಟ್ ಬೇಸರ ವ್ಯಕ್ತಪಡಿಸಿದ ಹಿನ್ನೆಲೆ, ಸ್ಪಷ್ಟನೆ ನೀಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ನ್ಯಾಯಾಂಗ ತನಿಖೆ ಆದೇಶದಲ್ಲಿ ಹೈಕೋರ್ಟ್ ಸೂಚನೆ ಪಾಲಿಸಲಾಗುವುದು. ಆದೇಶವನ್ನು ಪರಿಷ್ಕರಿಸಲಾಗುವುದು ಎಂದು ವಿವರಿಸಿದರು.
The Karnataka High Court on Tuesday came down heavily on the state government in the wake of the acute shortage of medical oxygen required in the treatment of COVID-19 patients. While holding a hearing the case on the COVID-19 crisis in the state, the Karnataka HC made strong remarks on the death of 24 people in Chamarajnagar due to lack of oxygen over a horrific 2 hours in the early hours of Monday and called for a judicial inquiry into the incident by a retired Judge of the HC.
09-08-25 03:32 pm
HK News Desk
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವ...
08-08-25 06:23 pm
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
09-08-25 02:49 pm
HK News Desk
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
09-08-25 04:22 pm
Mangaluru Correspondent
Dharmasthala,16th Spot at Bahubali Hill: ಧರ್ಮ...
09-08-25 02:16 pm
Udupi, Talaq; ವರದಕ್ಷಿಣೆ ಕಿರುಕುಳ ; ವಿದೇಶದಿಂದ ಮ...
09-08-25 11:36 am
Roshan Saldanha, ED Raid, Mangalore, Fraud: ರ...
08-08-25 11:10 pm
SIT, Kalleri, Buried Schoolgirl, Dharmasthala...
08-08-25 09:25 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm