ದಕ್ಷಿಣ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮಳೆ ; ಯೆಲ್ಲೋ ಅಲರ್ಟ್ ಘೋಷಣೆ

11-05-21 02:36 pm       Bangalore Correspondent   ಕರ್ನಾಟಕ

ಕರ್ನಾಟಕದ ಬಹುತೇಕ ಜಿಲ್ಲೆಗಗಳಲ್ಲಿ ಮೇ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Photo credits : skymetweather

ಬೆಂಗಳೂರು, ಮೇ 11: ಕರ್ನಾಟಕದ ಬಹುತೇಕ ಜಿಲ್ಲೆಗಗಳಲ್ಲಿ ಮೇ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅದನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಿರುವ ಪ್ರದೇಶಗಳು;

ಭಟ್ಕಳ, ಬೆಳ್ತಂಗಡಿ, ಮಡಿಕೇರಿ, ಬಸವನಬಾಗೇವಾಡಿ, ಬೆಳ್ಳೂರು, ಶ್ರವಣಬೆಳಗೊಳ, ಕಾರ್ಕಳ, ಪುತ್ತೂರು, ಯಲಬುರ್ಗ, ಬುಕ್ಕಪಟ್ನ, ಕಮ್ಮರಡಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್;

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆಯಾಗಲಿರುವ ಜಿಲ್ಲೆಗಳು;

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.

Dakshina Kannada and several parts of Karnataka witness huge rains. The weather forecast has declared a yellow alert. Read more