ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್‍ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್‍ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
15-09-25 04:45 pm
Bangalore Correspondent
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm