ಬ್ರೇಕಿಂಗ್ ನ್ಯೂಸ್
11-05-21 09:54 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 11: ರಾಜ್ಯದಲ್ಲಿ ಕೊರೊನಾ ಲಸಿಕೆಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ ರಾಜ್ಯ ಸರಕಾರ ಎರಡು ಕೋಟಿ ಲಸಿಕೆಯನ್ನು ಪಡೆಯಲು ಮುಂದಾಗಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಈಗಾಗ್ಲೇ 3 ಕೋಟಿ ಡೋಸ್ ಪಡೆಯಲು ಆರ್ಡರ್ ಮಾಡಿದ್ದೇವೆ. ಇದರಲ್ಲಿ ಒಂದು ಕೋಟಿ ಕೋವ್ಯಾಕ್ಸಿನ್ ಮತ್ತು ಎರಡು ಕೋಟಿ ಕೋವಿಶೀಲ್ಡ್ ಔಷಧಿ ಇರಲಿದೆ ಎಂದು ಹೇಳಿದ್ದಾರೆ.
ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಮೀಟಿಂಗಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಔಷಧಿ ಖರೀದಿ ವಿಭಾಗಕ್ಕೆ ಮುಖ್ಯಸ್ಥರಾಗಿ ನಿಯೋಜನೆಗೊಂಡಿರುವ ಅಂಜುಂ ಪರ್ವೇಜ್, ರಾಜ್ಯ ಔಷಧಿ ಪೂರೈಕೆ ಕಂಪನಿ ಮ್ಯಾನೇಜಿಂಗ್ ಡೈರೆಕ್ಟರ್ ಲತಾ ಕುಮಾರ್, ಆರೋಗ್ಯ ಇಲಾಖೆ ನಿರ್ದೇಶಕ ಓಂಪ್ರಕಾಶ್ ಪಾಟೀಲ್ ಭಾಗವಹಿಸಿದ್ದರು.
ಈವರೆಗೆ ಕೇಂದ್ರ ಸರಕಾರದ ಮೂಲಕವೇ ಲಸಿಕೆ ಪೂರೈಕೆ ಆಗುತ್ತಿತ್ತು. ಯಾವುದೇ ಕಂಪನಿಯಿಂದ ನೇರವಾಗಿ ಖರೀದಿ ಮಾಡಿಲ್ಲ. ಆದರೆ, ಈಗ ನಾವು ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯುತ್ತಿದ್ದೇವೆ. ಯಾವುದೇ ಕಂಪನಿಗಳಿಗೆ ಟೆಂಡರ್ ನಲ್ಲಿ ಭಾಗವಹಿಸಬಹುದು. ಏಳು ದಿನಗಳ ಒಳಗೆ ಈ ಪ್ರಕ್ರಿಯೆ ಪೂರೈಸುತ್ತೇವೆ. ಕಂಪನಿಗಳು ನೇರವಾಗಿ ಲಸಿಕೆ ಪೂರೈಕೆ ಮಾಡಬೇಕು ಎಂದು ಹೇಳಿದರು.
ನಗರ ಪ್ರದೇಶದವರು ಲಸಿಕೆ ಸಿಗುವುದಿಲ್ಲವೆಂದು ಗ್ರಾಮೀಣ ಪ್ರದೇಶಕ್ಕೆ ತೆರಳಬಾರದು. ಇದರಿಂದ ಗ್ರಾಮಾಂತರ ಪ್ರದೇಶದಲ್ಲಿ ತೊಂದರೆಯಾಗುವುದು. ನಗರ ಮತ್ತು ಗ್ರಾಮಾಂತರ ಎಲ್ಲ ಕಡೆಯೂ ಲಸಿಕೆ ಸಿಗುವಂತೆ ಮಾಡುತ್ತೇವೆ. ಈ ಬಗ್ಗೆ ಸಮಗ್ರವಾಗಿ ಮಾರ್ಗಸೂಚಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.
Two crore COVID-19 vaccine doses will be procured through global tender in order to meet the increased demand and to facilitate vaccination of the age group of 18-44 years, Deputy Chief Minister and state COVID task force head CN Ashwath Narayan said on Tuesday. In addition to this, an order has already been been placed for three crore vaccine doses — one crore Covaxin and two crore Covishield, he said.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
12-02-25 10:58 pm
Mangalore Correspondent
MP Brijesh Chowta, ESI Hospital: ಮಂಗಳೂರು ಇಎಸ್...
12-02-25 09:18 pm
Puttur Police Women PSI News, Traffic: ಪುತ್ತೂ...
12-02-25 06:05 pm
Ullal News, Dr Kalladka Prabhakar Bhat: ಸಾಕು...
11-02-25 07:44 pm
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
12-02-25 10:28 pm
Mangalore Correspondent
Honor killing Bangalore, Daughter killed, Cri...
12-02-25 06:23 pm
Bhagappa Harijan deadly Murder, Crime report:...
12-02-25 12:27 pm
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm