ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.

24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.

ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm