ಬ್ರೇಕಿಂಗ್ ನ್ಯೂಸ್
14-05-21 09:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 14: ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಕೊರೊನಾ ಲಸಿಕೆಗಾಗಿ ನೀಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಘೋಷಿಸಿದೆ.
ಶುಕ್ರವಾರ ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಈ ಘೋಷಣೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಲಸಿಕೆ ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಸಂಗ್ರಹಿಸಲು 100 ಕೋಟಿ ಯೋಜನೆ ರೂಪಿಸಿದ್ದೇವೆ. ಅವುಗಳನ್ನು ಖರೀದಿಸಿ ಕರ್ನಾಟಕದ ಜನರಿಗೆ ನೀಡಲು ಅನುಮತಿ ನೀಡಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
ಜನಸಾಮಾನ್ಯರಿಗೆ ಲಸಿಕೆ ಹಾಕಲು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಗಳು ಒಟ್ಟಾಗಿ ವಿಫಲವಾಗಿವೆ. ಈಗ ಅದನ್ನು ನಾವೇ ಮಾಡಲು ಬಯಸುತ್ತೇವೆ. ನಮಗೆ ಕೇವಲ ಎರಡು ಸಣ್ಣ ಅಗತ್ಯವಿದ್ದು, ಒಂದು ಕೇಂದ್ರ ಸರ್ಕಾರದಿಂದ, ಮತ್ತೊಂದು ರಾಜ್ಯ ಸರ್ಕಾರದಿಂದ ಅನುಮತಿ ಬೇಕಾಗಿದೆ ಎಂದರು.
ರಾಜಕೀಯವು ಈ ದಾರಿಯಲ್ಲಿ ಬರಲು ಬಿಡಬಾರದು ಎಂದು ಬಿಜೆಪಿಗೆ ನಾನು ಮನವಿ ಮಾಡುತ್ತೇನೆ. ಅವರ ಆತ್ಮನಿರ್ಭರ ಭಾರತ್ ಸಂಕಲ್ಪದಡಿಯಲ್ಲೇ, ಕಾಂಗ್ರೆಸ್ ಪಕ್ಷ ನೇರವಾಗಿ ಕೊರೊನಾ ಲಸಿಕೆ ಸಂಗ್ರಹಿಸಲು ಮತ್ತು ನಿರ್ವಹಿಸಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.ಪ್ರಸ್ತುತ, ಭಾರತದಲ್ಲಿ ಲಸಿಕೆ ಖರೀದಿಗೆ ಕೇಂದ್ರ ಮತ್ತು ರಾಜ್ಯವನ್ನು ಅನುಮತಿ ನಿಯಮಗಳಿವೆ. ಲಸಿಕೆಗಳನ್ನು ನೇರವಾಗಿ ಸಂಗ್ರಹಿಸಲು ಸರ್ಕಾರವು ಆಸ್ಪತ್ರೆಗಳು ಮತ್ತು ಕೈಗಾರಿಕೆಗಳಿಗೆ ಈ ಅನುಮತಿಯನ್ನು ನೀಡಬೇಕೆಂದು ಕರ್ನಾಟಕ ಕಾಂಗ್ರೆಸ್ ಒತ್ತಾಯಿಸಿದೆ.
ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭಿಸಲು ಕಾಂಗ್ರೆಸ್ 100 ಕೋಟಿ ರೂ. ಯೋಜನೆಯನ್ನು ಹೊಂದಿದೆ ಎಂದ ಡಿ.ಕೆ ಶಿವಕುಮಾರ್, ಅದರಲ್ಲಿ 10 ಕೋಟಿ ಹಣವನ್ನು ಕರ್ನಾಟಕ ಕಾಂಗ್ರೆಸ್ ಪಕ್ಷ ನೀಡುತ್ತಿದೆ. ಉಳಿದ ಹಣವನ್ನು ಕಾಂಗ್ರೆಸ್ ಶಾಸಕ/ ಎಂಎಲ್ಸಿಗಳ ನಿಧಿಯಿಂದ ಇನ್ನೂ 90 ಕೋಟಿ ರೂ. ಸಂಗ್ರಹಿಸಲು ನಾನು ಮನವಿ ಮಾಡುತ್ತೇನೆ ಎಂದರು.
The Karnataka Congress on Friday announced that it has prepared a ₹100 crore plan to procure COVID-19 vaccines directly from manufacturers and administer them to the people of Karnataka, KPCC president D.K. Shivakumar said in a press conference held alongside former Chief Minister and Leader of the Opposition Siddaramaiah.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 03:33 pm
Mangalore Correspondent
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm