ಕರ್ನಾಟಕದಲ್ಲಿ ಈ ವರೆಗೆ ಒಟ್ಟು 2,19,554 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ

27-08-20 09:53 pm       Headline Karnataka News Network   ಕರ್ನಾಟಕ

ಕರ್ನಾಟಕದಲ್ಲಿ ಈ ವರೆಗೆ ಒಟ್ಟು 2,19,554 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.70.87ರಷ್ಟಿದೆ. ಈ ವರೆಗೆ ಒಟ್ಟು 26,48,808 ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರು, ಆಗಸ್ಟ್ 27: ರಾಜ್ಯದಲ್ಲಿಂದು ಕೊರೊನಾ ಸ್ಫೋಟವಾಗಿದ್ದು, ಪ್ರಪ್ರಥಮ ಬಾರಿಗೆ ಕೇವಲ 24 ಗಂಟೆಗಳಲ್ಲಿ 9,386 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,09,793ಕ್ಕೆ ಏರಿಕೆಯಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 84,987ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಇಂದು 141 ಜನ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 5,232ಕ್ಕೆ ಏರಿಕೆಯಾಗಿದೆ. 747 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 7,866 ಜನ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈ ವರೆಗೆ ಒಟ್ಟು 2,19,554 ಜನ ಬಿಡುಗಡೆಯಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.70.87ರಷ್ಟಿದೆ. ಇಂದು 68,187 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ವರೆಗೆ ಒಟ್ಟು 26,48,808 ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿ 141 ಜನರ ಪೈಕಿ ಬೆಂಗಳೂರಿನಲ್ಲೇ 59 ಜನ ಕೊರೊನಾಗೆ ಬಲಿಯಾಗಿದ್ದಾರೆ. ಸಿಲಿಕಾನ್‍ಸಿಟಿಯಲ್ಲಿ ಇಂದು 3,357 ಪ್ರಕರಣಗಳು ಪತ್ತೆಯಾಗಿದ್ದು, 35,989 ಸಕ್ರಿಯ ಪ್ರಕರಣಗಳಿವೆ. 3,362 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.