ಬ್ರೇಕಿಂಗ್ ನ್ಯೂಸ್
17-05-21 05:12 pm Bangalore Correspondent ಕರ್ನಾಟಕ
Photo credits : Prajavaani
ಬೆಂಗಳೂರು, ಮೇ 17 : ಕೊರೊನಾ ಎಲ್ಲ ಸುಳ್ಳು. ಮಾಸ್ಕ್ ಹಾಕಬೇಕಿಲ್ಲ. ಮಾಸ್ಕ್ ಮಾತ್ರದಿಂದ ಕೊರೊನಾ ಓಡಿಸಲಾಗದು ಎನ್ನುತ್ತಿದ್ದ ಬೆಂಗಳೂರಿನ ವೈದ್ಯರೊಬ್ಬರ ಕ್ಲಿನಿಕ್ ರಿಜಿಸ್ಟ್ರೇಶನನ್ನೇ ರಾಜ್ಯ ಸರಕಾರ ರದ್ದು ಮಾಡಿದೆ.
ಜನರಿಗೆ ಮಿಸ್ ಗೈಡ್ ಮಾಡುತ್ತಿದ್ದಾರೆಂದು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಈ ಕ್ರಮ ತೆಗೆದುಕೊಂಡಿದೆ. ಬೆಂಗಳೂರಿನಲ್ಲಿ ಕೊರೊನಾ ರಾಡಿ ಎಬ್ಬಿಸಿದ್ದರೆ, ವೈದ್ಯ ಮಹಾಶಯರೊಬ್ಬರು ಅದೆಲ್ಲಾ ಸುಳ್ಳು ಎನ್ನುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಬಗ್ಗೆ ಮಾತು ಹರಿಯ ಬಿಟ್ಟಿದ್ದರು. ತಪ್ಪು ಸಂದೇಶ ಕೊಡುತ್ತಾ, ಅಪಪ್ರಚಾರ ಮಾಡುತ್ತಿದ್ದರು ಎಂಬ ಕಾರಣಕ್ಕೆ ರಿಜಿಸ್ಟ್ರೇಶನ್ ಸರ್ಟಿಫಿಕೇಟ್ ರದ್ದುಗೊಳಿಸಲು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಆದೇಶ ನೀಡಿದೆ. ಆದೇಶದ ಬೆನ್ನಲ್ಲೇ ಈ ರೀತಿಯ ಮಾಹಿತಿ ಬಿತ್ತರಿಸುತ್ತಿದ್ದ ಮೂಡಳಪಾಳ್ಯದಲ್ಲಿರುವ ಡಾ. ರಾಜು ಕೃಷ್ಣಮೂರ್ತಿಯವರ ಕ್ಲಿನಿಕ್ಗೆ ಬೀಗ ಹಾಕಲು ಜಿಲ್ಲಾ ಆರೋಗ್ಯಾಧಿಕಾರಿ ಮುಂದಾಗಿದ್ದಾರೆ.
ನಗರದ ಮೂಡಲಪಾಳ್ಯ ವೃತ್ತದಲ್ಲಿರುವ ಸಾಗರ್ ಕ್ಲಿನಿಕ್‌ನಲ್ಲಿ ವೈದ್ಯರು, ಶುಶ್ರೂಷಕರು ಸೇರಿದಂತೆ ಯಾವುದೇ ವೈದ್ಯಕೀಯ ಸಿಬ್ಬಂದಿ ಮಾಸ್ಕ್ ಧರಿಸದೇ, ಸ್ಯಾನಿಟೈಸರ್ ಬಳಸದೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು. ಇದು ಸಾರ್ವಜನಿಕರ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಬಹುದು ಎಂದು ಸಾರ್ವಜನಿಕರು, ತಜ್ಞರು ಆತಂಕ ವ್ಯಕ್ತಪಡಿಸಿದ್ದರು. ಆದರೆ, ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದ ಡಾ.ರಾಜು ಕೃಷ್ಣಮೂರ್ತಿ, ಮಾಸ್ಕ್ ಹಾಕಿಕೊಳ್ಳದೆ, ಸ್ಯಾನಿಟೈಸರ್ ಬಳಸದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದು ನನ್ನ ವೈಯಕ್ತಿಕ ಆಯ್ಕೆ. ಹಾಗೊಂದು ವೇಳೆ ಮಾಸ್ಕ್ ಹಾಕದೇ ಇರುವುದಕ್ಕೆ ಅಪಾಯವಾಗುವುದಿದ್ದರೆ ಅದರ ಮೊದಲ ಪರಿಣಾಮ ನನ್ನ ಮೇಲೆಯೇ ಆಗುತ್ತದೆ. ಎಲ್ಲದಕ್ಕಿಂತ ಮುಖ್ಯವಾದುದು ರೋಗಿಗಳಿಗೆ ಧೈರ್ಯ ತುಂಬುವುದು. ಆ ಕೆಲಸವನ್ನು ಮಾಡುತ್ತಿದ್ದೇನೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದರು.
ಕ್ಲಿನಿಕ್‌ನಲ್ಲಿ ವೈದ್ಯರು ಸೇರಿದಂತೆ ಒಟ್ಟು ಐವರು ಕೆಲಸ ಮಾಡುತ್ತಾರೆ. ಈವರೆಗೆ ಯಾರಿಗೂ ಕೊರೊನಾ ಪರೀಕ್ಷೆ ಮಾಡಿಸಿಲ್ಲ. ಈಗಾಗಲೇ ಅವರಿಗೆ ಸೋಂಕು ತಗುಲಿ ಹೋಗಿರಬಹುದು. ಆದರೆ, ಯಾರಿಗೂ ಅನಾರೋಗ್ಯ ಉಂಟಾಗಿಲ್ಲ ಎನ್ನುವುದನ್ನೂ ಹೇಳಿದ್ದರು. ಇದರ ಬೆನ್ನಲ್ಲೇ ಅನೇಕ ತಜ್ಞರು ಹಾಗೂ ವೈದ್ಯರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಾಸ್ಕ್ ಹಾಕದೇ ಚಿಕಿತ್ಸೆ ನೀಡುವುದು ಅಪಾಯಕಾರಿ. ಅದರಿಂದಾಗಿ ನಮ್ಮಿಂದ ಬೇರೆಯವರಿಗೆ ರೋಗ ಹರಡುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದರು.
The state government has canceled the Clinic registration license of Dr Raju Krishnamurthy for circulating the wrong message on Covid 19 on Social Media and News channels stating Don not wear a mask and Covid is not harmful.
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm