ಬ್ಲಾಕ್ ಫಂಗಸ್ ರೋಗಕ್ಕೆ ರಾಜ್ಯದಲ್ಲಿ ಉಚಿತ ಚಿಕಿತ್ಸೆ ; ಡಾ.ಕೆ.ಸುಧಾಕರ್

18-05-21 02:24 pm       Headline Karnataka News Network   ಕರ್ನಾಟಕ

ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಬೆಂಗಳೂರು,ಮೇ 18: ಕೋವಿಡ್‌ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೆ 97 ಜನರಿಗೆ ಕಪ್ಪು ಶಿಲೀಂಧ್ರ ರೋಗ ಬಂದಿದೆ. ಈ ರೋಗ ಕಾಣಿಸಿಕೊಂಡ ನಾಲ್ವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ ಪೈಕಿ, ಮೂವರು ಬೆಂಗಳೂರಿನವರು. ಒಬ್ಬರು ಕೋಲಾರ ಜಿಲ್ಲೆಯವರಾಗಿದ್ದಾರೆ.

ಬೆಂಗಳೂರು ಹೊರತುಪಡಿಸಿ ಮೈಸೂರು, ಶಿವಮೊಗ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್‌ಲಾಕ್ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ ಎಂದು ನೇತ್ರ ತಜ್ಞ ಭುಜಂಗ ಶೆಟ್ಟಿ ತಿಳಿಸಿದ್ದಾರೆ.

With multiple cases of mucormycosis or black fungus infections among patients who have recovered from Covid being reported across the state — health minister K Sudhakar put the figure at 97 the state government on Monday declared it a notifiable disease.