ರಾಜ್ಯದಲ್ಲಿ ಮತ್ತೆ 14 ದಿನ ಲಾಕ್‌ಡೌನ್; ಜೂನ್ 7ರವರೆಗೆ ವಿಸ್ತರಣೆ

21-05-21 07:28 pm       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರು, ಮೇ 21: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 14 ದಿನಗಳ ಕಾಲ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ 14 ದಿನಗಳ ಕಾಲ ಕೊರೊನಾ ಲಾಕ್‌ಡೌನ್ ವಿಸ್ತರಿಸಲಾಗಿದೆ, ಲಾಕ್‌ಡೌನ್ ಜೂನ್ 7ರ ಬೆಳಗಿನ ಜಾವ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಮೇ 10 ರಿಂದ ಮೇ 23ರವರೆಗೆ ಲಾಕ್‌ಡೌನ್ ವಿಧಿಸಲಾಗಿತ್ತು. ಲಾಕ್‌ಡೌನ್ ಶುರುವಾಗಿ ಇಷ್ಟು ದಿನ ಕಳೆದರೂ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮತ್ತೆ 14 ದಿನಗಳ ಕಾಲ್ ಲಾಕ್‌ಡೌನ್ ಮುಂದುವರೆಸಲು ಕ್ರಮ ಕೈಗೊಳ್ಳಲಾಗಿದೆ.

ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.

ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Chief Minister B S Yediyurappa on Friday declared another 14 days of extra lockdown from May 24th to June 6th, 201. The state is currently under complete lockdown till May 24.