ಬ್ರೇಕಿಂಗ್ ನ್ಯೂಸ್
26-05-21 12:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 26: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೂ ಕೂಡ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 7ರ ಬಳಿಕವೂ ಕೂಡ ಲಾಕ್‌ಡೌನ್ ಮುಂದುವರೆಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
ಈಗಾಗಲೇ ಮೇ 10ರಿಂದ 24ರವರೆಗಿದ್ದ ಲಾಕ್‌ಡೌನ್ ಅನ್ನು ಮತ್ತೆ 14 ದಿನಗಳ ಕಾಲ ಅಂದರೆ ಜೂನ್ 7ರವರೆಗೆ ವಿಸ್ತರಿಸಲಾಗಿತ್ತು, ಬೆಳಗ್ಗೆ 6 ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ನಿಧಾನಗತಿಯಲ್ಲಿ ಬರುತ್ತಿದ್ದರೂ ಕೂಡ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್ ವಿಸ್ತರಿಸುವುದು ಬಹುತೇಕ ಖಚಿತ ಎಂದೇ ಹೇಳಬಹುದು.
ಜೂನ್ 5ರಂದು ಸಭೆ:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜೂನ್ 5 ರಂದು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಲಾಕ್‌ಡೌನ್ ಮುಂದುವರೆಸಲೇಬೇಕು ಇಲ್ಲವಾದರೆ ಕೊರೊನಾ ಕೊಂಡಿಯನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹಲವು ತಜ್ಞರು ತಮ್ಮ ಅಭಿಪ್ರಾಯವನ್ನು ಸರ್ಕಾರದ ಮುಂದಿರಿಸಿದ್ದಾರೆ. ಜೂನ್ 5ರಂದು ಅಂತಿಮ ನಿರ್ಧಾರ ಹೊರಬೀಳಲಿದೆ.
ಸಾರಿಗೆ ಸಂಚಾರಕ್ಕೆ ಅನುಮತಿ:
ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಓಲಾ, ಆಟೋ ಸಂಚಾರಕ್ಕೆ ಅವಕಾಶ ನೀಡುವ ಸಾದ್ಯತೆ ಇದೆ, ಏ.50ರಷ್ಟು ಪ್ರಯಾಣಿಕರು ಮಾತ್ರ ಸಂಚಾರ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ. ಮದುವೆಯಲ್ಲಿ 40 ಮಂದಿ, ಅಂತ್ಯ ಸಂಸ್ಕಾರದಲ್ಲಿ 10 ಮಂದಿಗೆ ಅವಕಾಶ ನೀಡುವ ಚಿಂತನೆಯೂ ಸರ್ಕಾರದಲ್ಲಿದೆ ಎಂದು ಹೇಳಲಾಗುತ್ತಿದೆ.
ಹೋಂ ಐಸೊಲೇಷನ್ ರದ್ದು ಮಾಡಲು ಚಿಂತನೆ:
ಹೋಂ ಐಸೊಲೇಷನ್‌ನಲ್ಲಿದ್ದರೆ ಮನೆಯವರೆಲ್ಲರಿಗೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ, ಮತ್ತೊಂದು ವಿಷಯವೇನೆಂದರೆ ಯಾವ ಪ್ರಮಾಣದಲ್ಲಿ ಸೋಂಕು ತಗುಲಿದೆ ಎನ್ನುವ ಕುರಿತು ವೈದ್ಯರಿಗೂ ತಿಳಿಯುವುದಿಲ್ಲ, ರೋಗಿಗಳು ಕಣ್ಮುಂದೆ ಇದ್ದಾಗ ಮಾತ್ರ ಚಿಕಿತ್ಸೆ ನೀಡಲು ಸಹಾಯವಾಗುತ್ತದೆ, ಒಂದೊಮ್ಮೆ ಅನ್‌ಲಾಕ್ ಮಾಡಿದರೂ ಕೂಡ ವಾಣಿಜ್ಯ ಚಟುವಟಿಕೆಗಳಿಗೆ ಅನುಮತಿ ನೀಡಬಾರದು ಎನ್ನುವ ಒತ್ತಾಯವೂ ಕೇಳಿಬಂದಿದೆ.
If the number of coronavirus cases continues to drop further, the BS Yediyurappa-led Karnataka government may allow some relaxations in the statewide lockdown after June 7. If reports are to be believed, CM Yediyurappad has asked government officials and experts to prepare a plan for the lifting restrictions in a phased manner. The state is expected to witness unlocking in more than 3 phases.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm