ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆ ಸಾಧ್ಯತೆ: ಉಡುಪಿಯಲ್ಲಿ 'ಆರೆಂಜ್ ಅಲರ್ಟ್'

01-08-20 06:43 am       Headline Karnataka News Network   ಕರ್ನಾಟಕ

ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಚುರುಕು ಪಡೆದಿದೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದ್ದು, ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಉಡುಪಿ, ಆ 01: ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಇದೀಗ ಮತ್ತೆ ಚುರುಕು ಪಡೆದಿದೆ. ಮುಂದಿನ ಕೆಲವು ದಿನಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ತಿಳಿಸಿದ್ದು, ಉಡುಪಿ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಉಡುಪಿ ಜಿಲ್ಲೆಯಲ್ಲಿ 115 ಮಿ.ಮೀ ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ, ಹೀಗಾಗಿ ಜಿಲ್ಲೆಯಲ್ಲಿ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಜೊತೆಗೆ ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.