ಬ್ರೇಕಿಂಗ್ ನ್ಯೂಸ್
28-05-21 01:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 28: ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಜೂನ್ 7ರವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ತಗ್ಗದೇ ಹೋದ ಪಕ್ಷದಲ್ಲಿ ಜೂನ್ 7ರ ನಂತರವೂ ಲಾಕ್ ಡೌನ್ ವಿಸ್ತರಣೆ ಮಾಡುವ ಅವಶ್ಯಕತೆ ಇದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸದ್ಯಕ್ಕೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ಲಕ್ಷ ದಾಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 25 ಲಕ್ಷ ಮೀರಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 24,214 ಪ್ರಕರಣಗಳು ದಾಖಲಾಗಿದ್ದು, 476 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸೋಂಕಿನ ಪಾಸಿಟಿವಿಟಿ ಪ್ರಮಾಣ 17.59% ಇದೆ ಎಂದು ಅಂಕಿ ಅಂಶಗಳನ್ನು ಒದಗಿಸಿದ್ದಾರೆ. ಈ ಸಕ್ರಿಯ ಪ್ರಕರಣಗಳು ತಗ್ಗದಿದ್ದರೆ ಜೂನ್ 7ರ ನಂತರವೂ ಲಾಕ್‌ಡೌನ್ ಮಾಡುವುದು ಅವಶ್ಯಕ ಎಂದಿದ್ದಾರೆ. ಮುಂದೆ ಓದಿ...
"ಸಕ್ರಿಯ ಪ್ರಕರಣಗಳು ನಿರೀಕ್ಷೆಗೂ ಮೀರಿ ಹೆಚ್ಚಾಗಿವೆ"
ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿ ಕುರಿತು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನ ಕಂಪ್ಯುಟೇಷನಲ್ ಅಂಡ್ ಡೇಟಾ ಸೈನ್ಸಸ್ ವಿಭಾಗದ ಅಧ್ಯಕ್ಷ ಪ್ರೊ. ಶಶಿಕುಮಾರ್ ಗಣೇಶನ್ ವಿಶ್ಲೇಷಣೆ ನಡೆಸಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಅತಿ ಹೆಚ್ಚಿದ್ದು, ಲಾಕ್‌ಡೌನ್ ಇಲ್ಲದ ಸಮಯದಲ್ಲಿ ಇದ್ದುದಕ್ಕಿಂತ ಪರಿಸ್ಥಿತಿ ಕೆಟ್ಟದಾಗಿದೆ. ಇದು ಹೀಗೇ ಮುಂದುವರೆದರೆ ಲಾಕ್‌ಡೌನ್ ಮುಂದುವರೆಸುವ ಅವಶ್ಯಕತೆಯೂ ಇರುತ್ತದೆ ಎಂದು ಹೇಳಿದ್ದಾರೆ.
"ಮುಂದಿನ ನಾಲ್ಕೈದು ದಿನಗಳು ನಿರ್ಣಾಯಕ"
ಕೊರೊನಾ ಸೋಂಕು ಉಲ್ಬಣವಾಗುವುದನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಲಾಕ್‌ಡೌನ್ ಅನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಈಗಿರುವ ಸೋಂಕಿನ ಅಂಕಿ ಸಂಖ್ಯೆಯನ್ನು ಗಮನಿಸಿದರೆ, ಲಾಕ್‌ಡೌನ್‌ನಲ್ಲಿ ಏನೋ ಲೋಪವಿದೆ ಎಂಬುದನ್ನು ತೋರುತ್ತದೆ. ಪ್ರಸ್ತುತ ಸರ್ಕಾರ ಲಾಕ್‌ಡೌನ್ ಅಥವಾ ನಿರ್ಬಂಧಗಳನ್ನು ಸಡಿಲಿಸುವ ಆಲೋಚನೆ ಮಾಡಬಾರದು. ಈ ನಿಟ್ಟಿನಲ್ಲಿ ಮುಂದಿನ ನಾಲ್ಕೈದು ದಿನಗಳು ನಿರ್ಣಾಯಕವಾಗಿವೆ ಎಂದು ಅವರು ಡೆಕ್ಕನ್ ಹೆರಾಲ್ಡ್‌ಗೆ ಹೇಳಿಕೆ ನೀಡಿದ್ದಾರೆ.
"ಲಾಕ್‌ಡೌನ್ ನಿಯಮಗಳು ಕಠಿಣವಾಗಿರಬೇಕು"
ಇದೇ ಹೇಳಿಕೆಯನ್ನು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿರುವ ಡಾ. ಗಿರಿಧರ್ ಆರ್ ಬಾಬು ಅವರು ಪ್ರತಿಧ್ವನಿಸಿದ್ದಾರೆ. ಕ್ರಮಗಳು ಕಠಿಣವಾಗಿದ್ದರೆ ಮಾತ್ರ ಲಾಕ್‌ಡೌನ್ ಪರಿಣಾಮಕಾರಿಯಾಗಿರುತ್ತದೆ. ಇಲ್ಲವೆಂದರೆ ಲಾಕ್‌ಡೌನ್ ನಿಂದ ಏನೂ ಪ್ರಯೋಜನವಾಗದು ಎಂದಿದ್ದಾರೆ. ಲಾಕ್‌ಡೌನ್‌ನ ಮೊದಲ ಭಾಗದಲ್ಲಿ ಜನರಿಗೆ ಬೆಳಿಗ್ಗೆ ನಾಲ್ಕು ಗಂಟೆಗಳ ಅವಧಿ ರಿಲ್ಯಾಕ್ಸೇಷನ್ ನೀಡಲಾಗಿದೆ. ಈ ಅವಧಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನದಟ್ಟಣೆ ಉಂಟಾಗುತ್ತಿದೆ. ಇದರೊಂದಿಗೆ ಕೊರೊನಾ ಪರೀಕ್ಷೆಗಳೂ ನಿಧಾನವಾಗಿವೆ ಎಂದು ಹೇಳಿದ್ದಾರೆ.
If the number of active coronavirus cases does not drop, the ongoing lockdown in Karnataka may have to be extended beyond June 7, a leading portal reported quoting experts as saying.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm