ಬ್ರೇಕಿಂಗ್ ನ್ಯೂಸ್
31-05-21 12:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 31: ಮುಂದಿನ ಐದು ದಿನಗಳ ಕಾಲ ಕೇರಳ ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 2 ರಿಂದ 4ರವರೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅಧಿಕ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ಒಂದೆರೆಡು ವಾರಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೇರಳಕ್ಕೆ ಪ್ರವೇಶಿಸಬೇಕಿದ್ದು ಮುಂಗಾರು ಮೂರು ದಿನ ತಡವಾಗಿ ಆಗಮಿಸಲಿದೆ.


ಜೂನ್ 3ರಿಂದ ಕೇರಳದಲ್ಲಿ ಮುಂಗಾರಿನ ಪ್ರವೇಶವಾಗಲಿದೆ. ಇದರ ಪರಿಣಾಮವಾಗಿ ನಾಳೆಯಿಂದ (ಜೂನ್ 1) ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ;
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ರಿಂದ ರಾಜ್ಯದಲ್ಲಿ ಮಳೆ;
ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿತ್ತು. ಆದರೆ, ಜೂನ್ 3ರಿಂದ ಕೇರಳದಲ್ಲಿ ಮುಂಗಾರು ಮಳೆಯಾಗಲಿದೆ. ಜೂನ್ 1ರಿಂದ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
The India Meteorological Department (IMD) said on Sunday that the southwest monsoon will most probably hit Kerala on Monday. The conditions will become favourable for onset of the monsoon over southern tip of Kerala on May 31, the IMD's said in its forecast.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm