ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm