ಸಿಬಿಎಸ್‌ಇ ಪಿಯುಸಿ ಪರೀಕ್ಷೆ ರದ್ದು ; ಮೋದಿ ಪರೀಕ್ಷೆ ರದ್ದು ಮಾಡಿದರೂ ಸುರೇಶ್ ಕುಮಾರ್ ಮನಸು ಮಾಡ್ತಿಲ್ಲ

02-06-21 12:40 pm       Bangalore Correspondent   ಕರ್ನಾಟಕ

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದಲ್ಲಿ ಪರಿಸ್ಥಿತಿ ಅವಲೋಕಿಸಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಬೆಂಗಳೂರು, ಜೂ. 01: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2021ನೇ ಸಾಲಿನ ಸಿಬಿಎಸ್‌ಇ ಪರೀಕ್ಷೆಯನ್ನು ರದ್ದು ಮಾಡಿ ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನಮಗೆ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯ ಮುಖ್ಯ ಎಂದು ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದಲ್ಲಿ ಪರಿಸ್ಥಿತಿ ಅವಲೋಕಿಸಿ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾದರೆ ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿರುವ ಸಂದೇಶವನ್ನು ರವಾನಿಸಿದ್ದಾರೆ.

ಮೋದಿ  ಪರೀಕ್ಷೆ ರದ್ದು ಮಾಡಿದರೂ ಸುರೇಶ್ ಕುಮಾರ್ ಮನಸು ಮಾಡ್ತಿಲ್ಲ ;

ಕೊರೊನಾ ಅಲೆ ಹಿನ್ನೆಲೆಯಲ್ಲಿ ಸಿಬಿಎಸ್‌ಇ ಹತ್ತನೇ ತರಗತಿ ಪರೀಕ್ಷೆಗಳನ್ನು ಒಂದೂವರೆ ತಿಂಗಳ ಹಿಂದೆಯೇ ರದ್ದು ಮಾಡಿ ಕೇಂದ್ರ ಸರ್ಕಾರ ತೀರ್ಮಾನ ಪ್ರಕಟಿಸಿತ್ತು. ಈ ತೀರ್ಮಾನದ ಬೆನ್ನಲ್ಲೇ ರಾಜ್ಯದಲ್ಲಿ ಜೂನ್‌ನಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್‌ಎಲ್‌ಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಒಂದು ತಿಂಗಳ ಮುಂಚಿತವಾಗಿ ಪರೀಕ್ಷೆ ದಿನಾಂಕ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿಯೇ ದೇಶದ ಪರಿಸ್ಥಿತಿ ಅವಲೋಕಿಸಿ ರಾಷ್ಟಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ. ಇದರಿಂದ ಅನಿರೀಕ್ಷಿತ ಪರೀಕ್ಷೆ ಬಗ್ಗೆ ಮೂಡಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಆದರೆ ರಾಜ್ಯದಲ್ಲಿ ಶಿಕ್ಷಣ ಸಚಿವರು ಮಾತ್ರ ವಿಚಿತ್ರ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಮೋದಿ ಟ್ವೀಟ್ ಅಲ್ಲ ಮಾಧ್ಯಮ ವರದಿ ಅಂತೆ;

ಪ್ರಧಾನಿ ನರೇಂದ್ರ ಮೋದಿಯವರೇ ಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಮಾಧ್ಯಮಗಳ ವರದಿ ಎಂದು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ. ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ರಾಜ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಎಸ್. ಅವರು ತಿಳಿಸಿದ್ದಾರೆ. ಕೇಂದ್ರೀಯ ಮಂಡಳಿಯ ಪರೀಕ್ಷೆ ರದ್ದು ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಪಠ್ಯ ಕ್ರಮ ಅನುಸರಿಸಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿ ಅವಲೋಕಿಸಿ, ಮೌಲ್ಯಮಾಪನ ಅವಶ್ಯಕತೆ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ಸುದೀರ್ಘ ಚರ್ಚೆ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅನ್ಯ ಸಚಿವರ ಮಾತಿಗೆ ಬೆಲೆ ಇಲ್ಲ;

ಇನ್ನು ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆ ರದ್ದು ಮಾಡಬೇಕೆಂದು ಉನ್ನತ ಶಿಕ್ಷಣ ಸಚಿವ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಸಂಸದ ಪಿ.ಸಿ. ಮೋಹನ್ ಕೂಡ ಇದನ್ನೇ ಸ್ಪಷ್ಟಪಡಿಸಿದ್ದಾರೆ. ಆದರೆ, ರಾಜ್ಯ ಶಿಕ್ಷಣ ಮಂತ್ರಿಗಳು ಮಾತ್ರ ಪರಿಸ್ಥಿತಿ ಅವಲೋಕಿಸಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ಮಾಡುವುದರಲ್ಲೇ ತಲ್ಲೀನರಾಗಿದ್ದಾರೆ. ಇನ್ನೆರಡು ದಿನದಲ್ಲಿ ಯಾವ ತೀರ್ಮಾನ ಪ್ರಕಟಿಸುತ್ತಾರೋ ಕಾದು ನೋಡಬೇಕು.

Karnataka Primary and Secondary Education Minister, S Suresh Kumar, announced that the state education board is likely to make a decision today, May 02, 2021, regarding the Class 12 board exams. Yesterday, June 01, 2021, the Central Board of Secondary Education (CBSE) canceled the Class 12 board exams.