ಬ್ರೇಕಿಂಗ್ ನ್ಯೂಸ್
05-06-21 11:14 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 05: ರಾಜ್ಯಕ್ಕೆ ಮುಂಗಾರು ಪ್ರವೇಶವಾವಾಗಿದ್ದು, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡನ್ನು ಪ್ರವೇಶಿಸಿರುವ ನೈಋತ್ಯ ಮುಂಗಾರು ಜೂನ್ 05ರಂದು ಉತ್ತರ ಒಳನಾಡಿನ ಪ್ರದೇಶ ತಲುಪಲಿದೆ.ಆ ಮೂಲಕ ರಾಜ್ಯದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾತ್ರಿ 10ಗಂಟೆಯವರೆಗೆ ನಗರದ ಮಾರಪ್ಪನಪಾಳ್ಯದಲ್ಲಿ ಅಧಿಕ ಮಳೆ ಸುರಿದಿದೆ, 72 ಮಿ.ಮೀನಷ್ಟು ಮಳೆಯಾಗಿದೆ. ಸಾರಕ್ಕಿಯಲ್ಲಿ 63, ಬಸವನಗುಡಿ, ಅಟ್ಟೂರಿನಲ್ಲಿ 49, ವಿದ್ಯಾರಣ್ಯಪುರದಲ್ಲಿ 41, ಎಚ್‌ಎಸ್‌ಆರ್ ಲೇಔಟ್‌ನಲ್ಲಿ 38.5 ಮಿ.ಮೀನಷ್ಟು ಮಳೆಯಾಗಿದೆ.
ನಾಲ್ಕು ದಿನ ತಡವಾಗಿ ಮುಂಗಾರು;
ವಾಡಿಕೆಯಂತೆ ಜೂನ್ 1ರಂದೇ ರಾಜ್ಯ ಪ್ರವೇಶಿಸಬೇಕಿದ್ದ, ಮುಂಗಾರು ಮಾರುತಗಳು ನಾಲ್ಕು ದಿನ ತಡವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗವನ್ನು ಪ್ರವೇಶಿಸಿದೆ. ಶನಿವಾರ ಉತ್ತರ ಒಳನಾಡನ್ನು ಹಾದು ಹೋಗುವ ಮೂಲಕ ಈ ಮಾರುಗಳು ಇಡೀ ರಾಜ್ಯವನ್ನು ಆವರಿಸಲಿವೆ.
ಮುಂಗಾರು ಅರಂಭವಾದ ಮೊದಲ ದಿನವೇ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ದಾಖಲಾಗಿದೆ.ಇದೇ ರೀತಿ ಜೂನ್ 6ರವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಕಡೆಗಳಲ್ಲಿ ಗುಡುಗು ಮತ್ತು ಗಾಳಿ ಸಹಿತ ಮಳೆ ಮುಂದುವರೆಯಲಿದೆ.
ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್
ಜೂನ್ 5ರಂದು ಅತ್ಯಧಿಕ ಮಳೆ ಬೀಳುವುದರಿಂದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಹಾವೇರಿ, ಧಾರವಾಡ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಲ್ಲಿ ಅಧಿಕ ಮಳೆ
ನಗರದಲ್ಲಿ ಶುಕ್ರವಾರ ಗುಡುಗು ಸಹಿತ ಧಾರಾಕಾರ ಮಳೆ ಸುರಿದಿದೆ, ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನದ ನಂತರ ಶುರುವಾದ ಮಳೆ ಕೆಲ ಕಾಲ ಜೋರಾಗಿ ಅಬ್ಬರಿಸಿತು. ಇದರಿಂದ ಜೆಪಿನಗರ 6ನೇ ಹಂತ, ಜಯನಗರ 5ನೇ ಬ್ಲಾಕ್‌ನ ರಸ್ತೆಗಳಲ್ಲಿ ನಾಲ್ಕು ಕಡೆ ರದ ರೆಂಬೆಗಳು ಮುರಿದು ಬಿದ್ದಿವೆ. ರಾಜ್ಯದಲ್ಲಿ ಮುಂಗಾರು ಪ್ರವೇಶವಾದ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಜೂನ್ 7ರವರೆಗೂ ಮಳೆ ಮುಂದುವರೆಯಲಿದೆ.
Monsoon has entered the state as per the usual time of June first week. The monsoon clouds that arrived in Kerala on Thursday have entered Karwar of Uttara Kannada district. Many districts including Bengaluru received copious amounts of rain on June 4.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm