ಬ್ರೇಕಿಂಗ್ ನ್ಯೂಸ್
05-06-21 04:37 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 5: ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಕ್ರವಾರ ತಿಳಿಸಿದ್ದರು.
ಪೂರ್ವಭಾವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಆಧಾರವಾಗಿ ಇಟ್ಟುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು. ಆಗ ಪಡೆದ ಅಂಕಗಳ ಆಧಾರದ ಮೇಲೆ ಈಗ ಮಾನದಂಡ ನಿಗದಿ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅದೇ ರೀತಿ ಎಸ್ಎಸ್ಎಲ್‌ಸಿ ಅಂಕಗಳನ್ನೂ ಪರಿಗಣಿಸಿ ದ್ವಿತೀಯ ಪಿಯು ಫಲಿತಾಂಶ ಘೋಷಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ನ್ಯಾಯಯುತವಾಗಿರಲು ಈ ನಡೆಯನ್ನು ಅನುಸರಿಸುತ್ತಿದ್ದೇವೆ. ಈ ಕುರಿತು ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದರು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಅಂಕಿ-ಅಂಶ ಪಡೆಯಬೇಕು ಎಂದು ಸೂಚಿಸಲಾಗಿದ್ದು, ಜೊತೆಗೆ ಪ್ರಥಮ ಪಿಯುಸಿ ಅಂಕಗಳೊಂದಿಗೆ ಸೂಕ್ತ ರೀತಿಯಲ್ಲಿ ಹೊಂದಿಸಲೂ ಆದೇಶಿಸಲಾಗಿದೆ. ಜೂನ್ ಮಾಸಾಂತ್ಯಕ್ಕೆ ಗ್ರೇಡಿಂಗ್ ಫಲಿತಾಂಶ ಘೋಷಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.
ವೃತ್ತಿಪರ ಕೋರ್ಸ್‌ಗೆ ಸಿಇಟಿ ಅಂಕ ಮಾತ್ರ ಪರಿಗಣಿಸಿ;
ಇನ್ನು ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಹಿನ್ನೆಲೆ ಈ ಮನವಿ ಮಾಡಿಕೊಂಡಿರುವ ಅವರು, ವೃತ್ತಿಪರ ಕೋರ್ಸ್‌ಗೆ ಪ್ರವೇಶ ಕಲ್ಪಿಸುವ ಸಿಇಟಿ ಪರೀಕ್ಷೆಗೆ ಪಿಯುಸಿ ಫಲಿತಾಂಶ ಪರಿಗಣಿಸಿ ವೇಟೇಜ್ ನೀಡುವ ಪ್ರಕ್ರಿಯೆ ಬೇಡ ಎಂದಿದ್ದಾರೆ.
ಕೇವಲ ಸಿಇಟಿ ಪರೀಕ್ಷೆಗಳ ಅಂಕಗಳನ್ನು ಮಾತ್ರ ಶ್ರೇಣಿಗೆ ಪರಿಗಣಿಸುವ ತೀರ್ಮಾನ ತೆಗೆದುಕೊಳ್ಳಿ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಡಾ.ಅಶ್ವಥ್ ನಾರಾಯಣ್ ಅವರಿಗೆ ಸುರೇಶ್ ಕುಮಾರ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Primary and Secondary Education Minister S. Suresh Kumar has directed the Department of Pre-University Education to also consider Class 10 (SSLC) marks when grading second pre-university (PU) students. While announcing the cancellation of II PU exams on Friday, the Minister had said that the previous year’s marks would be taken into consideration.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm