ಬ್ರೇಕಿಂಗ್ ನ್ಯೂಸ್
07-06-21 10:05 pm Mangaluru Correspondent ಕರ್ನಾಟಕ
ಮೈಸೂರು, ಜೂನ್ 7: ವರ್ಗಾವಣೆ ಮತ್ತು ಮೈಸೂರಿನ ಭೂ ಮಾಫಿಯಾದ ಬಗ್ಗೆ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಕೆಲಸ ಮಾಡಲು ಬಿಡಲಿಲ್ಲ. ಕೆಲವರು ಅನಗತ್ಯವಾಗಿ ತೊಂದರೆ ಕೊಟ್ಟರು. ಭೂಮಿ ಒತ್ತುವರಿ ತೆರವು ಮಾಡಲು ನಾನು ಪ್ರಯತ್ನ ಮಾಡಿದ್ದೆ. ಕೆರೆಗಳನ್ನು ಉಳಿಸೋದು, ಸರ್ಕಾರಿ ಭೂಮಿ ರಕ್ಷಣೆ ಮಾಡೋದು ನನ್ನ ಆದ್ಯತೆ ಆಗಿತ್ತು. ಆ ನಿಟ್ಟಿನಲ್ಲಿ ಮೊದಲ ದಿನದಿಂದಲೂ ಕಾರ್ಯ ನಿರ್ವಹಿಸುತ್ತಿದ್ದೆ. ಆದರೆ ನನ್ನ ಕೆಲಸಕ್ಕೆ ಕೆಲವರು ಆಕ್ಷೇಪ ತೆಗೆದರು ಎಂದು ರೋಹಿಣಿ ಹೇಳಿದ್ದಾರೆ.
ಕೇರ್ಗಳ್ಳಿ ಕೆರೆಯ ಒತ್ತುವರಿ ತೆರವು ಮಾಡಿ ನೀರು ತುಂಬಿಸಲು ಪ್ರಯತ್ನಿಸಿದ್ದೆ. ಅದರ ಜತೆಗೆ ಸರ್ವೇ ನಂ. 4ರ 1500 ಎಕರೆ ಜಾಗ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಒಳ್ಳೆಯ ಲಾಯರ್ ಇಟ್ಟು ಹೋರಾಟ ಮಾಡುತ್ತಿದ್ದೇವೆ. ಇದರ ಮಧ್ಯೆ ಕೋವಿಡ್ ನಿಯಂತ್ರಣಕ್ಕೂ ಪ್ರಾಮುಖ್ಯತೆ ಕೊಟ್ಟು ಕೆಲಸ ಮಾಡಿದ್ದೇನೆ. ವ್ಯಾಕ್ಸಿನೇಷನ್‌ನಲ್ಲಿ ಮೈಸೂರು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಜುಲೈ ವೇಳೆಗೆ ಮೈಸೂರನ್ನು ಕರೊನಾ ಮುಕ್ತ ಎಂದು ಘೋಷಣೆ ಮಾಡಬೇಕು ಅನ್ನುವ ನಿಟ್ಟಿನಲ್ಲಿ ಕೆಲಸ ಮಾಡಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.
ಮೈಸೂರಿನ ಜನ ನನ್ನನ್ನು ಮನೆ ಮಗಳಂತೆ ಕಂಡಿದ್ದಾರೆ. ಇಲ್ಲಿಂದ ಬಿಟ್ಟು ಹೋಗುವಾಗ ತವರು ಮನೆ ಬಿಟ್ಟು ಹೋಗುವ ಭಾವನೆ ನನಗೆ ಆಗುತ್ತಿದೆ. ಮೈಸೂರಿಗೆ ಜನತೆಗೆ ನನ್ನ ಧನ್ಯವಾದಗಳು ಎಂದು ಮೈಸೂರಿನಿಂದ ವರ್ಗಗೊಂಡು ತೆರಳುತ್ತಿರುವ ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿ ಭಾವನಾತ್ಮಕ ನುಡಿಗಳನ್ನಾಡಿದ್ದಾರೆ.
ಇದೇ ವೇಳೆ, ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಂಧೂರಿ, ನನಗೆ ಆಕೆಯ ಬಗ್ಗೆ ಅನುಕಂಪ ಇದೆ. ಅವರ ಮಾತಲ್ಲಿ ಇನ್‌ಸೆಕ್ಯೂರಿಟಿ ಕಾಣಿಸುತ್ತಿದೆ. ಆ ಹತಾಸೆಯಿಂದಲೇ ಅವರು ನನ್ನ ಬಗ್ಗೆ ಆರೋಪ ಮಾಡುತ್ತಿದ್ದಾರೆ. ಅವರ ಬಗ್ಗೆ ನನಗೆ ಮರುಕ ಉಂಟಾಗುತ್ತಿದೆ. ಅಷ್ಟು ಮಾತ್ರ ಹೇಳಬಲ್ಲೆ. ಅದರಾಚೆಗೆ ನಾನು ಏನೂ ಹೇಳಲಾರೆ. ಐಎಎಸ್ ಅಧಿಕಾರಿಗಳಾದವರಿಗೆ ಪ್ರತಿಯೊಂದಕ್ಕೂ ಪ್ರೊಸೀಜರ್ ಇದೆ. ಆ ಚೌಕಟ್ಟಿನಲ್ಲೇ ನಾನು ಕೆಲಸ ಮಾಡಿದ್ದೇನೆ ಎಂದು ಹೇಳಿದರು ರೋಹಿಣಿ ಸಿಂಧೂರಿ.
ರಾಜಕಾರಣಿಗಳ ಟೀಕೆಗೆ ಗುರಿಯಾಗಿದ್ದ ರೋಹಿಣಿ ಸಿಂಧೂರಿ, ಬಳಿಕ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಜೊತೆಗೂ ಜಟಾಪಟಿಗೆ ಕಾರಣವಾಗಿದ್ದರು. ಭೂಮಾಫಿಯಾದ ತನಿಖೆಗೆ ಕೈಹಾಕಿದ್ದಕ್ಕಾಗಿ ರಾಜಕಾರಣಿಗಳು ವಿರೋಧಿಸಲು ಮುಂದಾಗಿದ್ದರು ಎನ್ನುವ ಆರೋಪ ಕೇಳಿಬಂದಿತ್ತು.
Rohini Sindhuri, former Deputy Commissioner of Mysuru, on Monday described as “sad and unfortunate” that an officer had “colluded” with a few politicians in the middle of a pandemic to target the Deputy Commissioner responsible for the district’s disaster management situation.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm