ಬ್ರೇಕಿಂಗ್ ನ್ಯೂಸ್
08-06-21 04:09 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 8: ಮಾಜಿ ಸಚಿವ, ಹಾನಗಲ್ ಶಾಸಕ ಸಿಎಂ ಉದಾಸಿ (85) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಇಂದು (ಜೂನ್ 8) ಮಧ್ಯಾಹ್ನ ನಿಧನರಾಗಿದ್ದಾರೆ. ಜನತಾ ಪರಿವಾರ ಹಿನ್ನೆಲೆಯ ಉದಾಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು.
ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಉದಾಸಿ ಸದ್ಯ ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದರು.
ಉದಾಸಿಯವರ ಪೂರ್ತಿ ಹೆಸರು ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ ಎಂದಾಗಿದ್ದು, ಅವರು ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಉದಾಸಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಪುತ್ರ ಶಿವಕುಮಾರ ಉದಾಸಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ಎಂಟನೆ ತರಗತಿ ವಿದ್ಯಾಭಾಸ ಮಾಡಿದ್ದ ಉದಾಸಿ, 1974ರಲ್ಲಿ ಹಾನಗಲ್ ಪುರಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. 1974ರಿಂದ 1980ರ ವರೆಗೆ ಪುರಸಭೆ ಅಧ್ಯಕ್ಷರಾಗಿದ್ದರು. 1983ರಲ್ಲಿ ಹಾನಗಲ್ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದರು. 1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 1994ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಮೂರನೇ ಬಾರಿಗೆ ಶಾಸಕರಾಗಿದ್ದರು. 1999ರಲ್ಲಿ ಜೆಡಿಯುನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2004 ಮತ್ತು 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ, 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಆರನೇ ಬಾರಿಗೆ ಗೆಲುವು ಸಾಧಿಸಿದ್ದರು.
ಅಷ್ಟೇ ಅಲ್ಲದೆ, ಸಿ.ಎಂ. ಉದಾಸಿ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. 1994ರಲ್ಲಿ ದಿವಂಗತ ಜೆ.ಎಚ್.ಪಟೇಲ್ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು. 2004ರಲ್ಲಿ ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕೆಲಸ ಮಾಡಿದ್ದರು. ಜವಳಿ ಸಚಿವರಾಗಿ ಮತ್ತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.
ರಾಜಕೀಯಕ್ಕೆ ಬರುವ ಮೊದಲು ಭತ್ತದ ವ್ಯಾಪಾರ ಮಾಡುತ್ತಿದ್ದ ಉದಾಸಿ, ನಂತರ ಹಾನಗಲ್ ಪಟ್ಟಣದಲ್ಲಿ ರೈಸ್ ಮಿಲ್ ಆರಂಭಿಸಿದ್ದರು. ಆಬಳಿಕ ಹಿರಿಯರ ಒತ್ತಾಯಕ್ಕೆ ಮಣಿದು ಪುರಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಮೂಲಕ ರಾಜಕೀಯ ರಂಗ ಪ್ರವೇಶಿಸಿದ್ದರು.
BJP MLA Hanagal Assembly constituency CM Udasi (85) died on Tuesday. He was hospitalized on May 25 Due to an illness and was undergoing treatment in the Intensive Care Unit.
12-02-25 12:55 pm
HK News Desk
ಬೆಂಗಳೂರಿನಲ್ಲಿ ಮೂರು ದಿನ ಜಾಗತಿಕ ಹೂಡಿಕೆದಾರರ ಸಮಾವ...
11-02-25 11:12 pm
R Ashok, CM Siddaramaiah, Mysuru Fight: ಒಳಿತು...
11-02-25 10:57 pm
Bjp Sandeep Reddy, Dr Sudhakar: ನಿನ್ನ ಅಕ್ರಮಗಳ...
11-02-25 10:34 pm
Mysuru Fight, Crime Update: ಉದಯಗಿರಿ ಠಾಣೆಗೆ ಖಾ...
11-02-25 03:40 pm
11-02-25 04:19 pm
HK News Desk
Wedding, Cibil Score: ಸಿಬಿಲ್ ಸ್ಕೋರ್ ಚೆನ್ನಾಗಿಲ...
10-02-25 05:48 pm
CBI arrest, Tirupati laddu: ತಿರುಪತಿ ಲಡ್ಡಿನಲ್ಲ...
10-02-25 02:13 pm
ಮೆಕ್ಸಿಕೋ ; ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ...
09-02-25 09:32 pm
Delhi Election Results 2025, BJP Win; ದೆಹಲಿಯಲ...
08-02-25 02:23 pm
11-02-25 07:44 pm
Mangalore Correspondent
Ashok Rai, Temple, Nalin Kateel : ನಳಿನ್ ಅವರೇ...
11-02-25 04:50 pm
Mangalore, Brijesh Chowta, Wenlock hospital:...
10-02-25 11:09 pm
Drone, Puttur Konark Rai, Indian Army: ಆಕಾಶದಿ...
10-02-25 10:34 pm
Mangalore News, Wenlock hospital, operation:...
09-02-25 11:03 pm
12-02-25 12:27 pm
HK News Desk
ಮ್ಯಾಟ್ರಿಮನಿ ಸೈಟ್ ನಲ್ಲಿ ಗಾಳ ; ಸರ್ಕಾರಿ ನೌಕರನೆಂದ...
11-02-25 06:41 pm
Mangalore Police, Crime: ಕೊಲೆ ಅಪರಾಧಿಗೆ ಆಶ್ರಯ...
09-02-25 07:35 pm
Bangalore, Udupi crime, Fraud: ಕ್ಯಾಸಿನೋ, ಬಿಟ್...
08-02-25 10:16 pm
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm